ರಾಮನಗರ | ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಯ ಕೊಲೆ; ಪುನೀತ್ ಕೆರೆಹಳ್ಳಿ ತಂಡದ ಮೇಲೆ ಎಫ್‌ಐಆರ್

Date:

  • ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಕಾರ್ಯಕರ್ತರ ದಾಳಿ
  • ಜಾನುವಾರು ರಕ್ಷಣೆ ಸಂಬಂಧ ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲು

ಕಸಾಯಿಖಾನೆಗೆ ಜಾನುವಾರು ಸಾಗಾಟ ಮಾಡುತ್ತಿದ್ದಾಗ ರಾಮನಗರದ ಸಾತನೂರು ಬಳಿ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿ ರಾಮನಗರ ಜಿಲ್ಲೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೀಗ ಇದ್ರೀಸ್ ಪಾಷಾ ಕುಟುಂಬ ಪ್ರತಿಭಟನೆ ನಡೆಸುತ್ತಿದೆ.

ಮಂಡ್ಯ ಜಿಲ್ಲೆ ಮಳವಳ್ಳಿಯ ಇದ್ರೀಸ್ ಪಾಷಾ (35) ಮೃತ ದುರ್ದೈವಿ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಬಳಿ ಇದ್ರೀಸ್ ಪಾಷಾ ಶವ ಪತ್ತೆಯಾಗಿದೆ.

ಮೃತನ ಕುಟುಂಬ ಸಾತನೂರು ಠಾಣೆ ಬಳಿ ಪ್ರತಿಭಟನೆ ನಡೆಸಿದ್ದು, “ ಇದ್ರೀಸ್ ಪಾಷಾ ಸಾವಿಗೆ ಪುನೀತ್ ಕೆರೆಹಳ್ಳಿ ಕಾರಣ. ಕೂಡಲೇ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗೃಹ ಸಚಿವರ ಕ್ಷೇತ್ರದಲ್ಲಿ ಮೂಲ ಸೌಕರ್ಯ ಕೊರತೆ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ವಾಹನದಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಲಾಗಿತ್ತು. ಜಾನುವಾರು ರಕ್ಷಣೆ ಸಂಬಂಧ ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದಾಳಿ ನಡೆದ ಸ್ವಲ್ಪ ದೂರದಲ್ಲೇ ಇದ್ರೀಸ್ ಪಾಷಾ ಅನುಮಾನಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದು ತಿಳಿದುಬಂದಿದೆ.

ಇದ್ರೀಸ್ ಅವರು ಗೋವುಗಳನ್ನು ಖರೀದಿಸಿದ ದಾಖಲೆಗಳನ್ನು ತೋರಿಸಿದ್ದರು. ಆದರೆ, ಪುನೀತ್ ಮತ್ತು ತಂಡ ತಡೆದು ನಿಲ್ಲಿಸಿ ₹2 ಲಕ್ಷಕ್ಕೆ ಬೇಡಿಕೆಯಿಟ್ಡಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಹಣ ಕೊಡದಿದ್ದರೆ ಅವರನ್ನು ಕೊಲ್ಲುತ್ತೇವೆ ಮತ್ತು ಪಾಕಿಸ್ತಾನಕ್ಕೆ ಹಿಂತಿರುಗಿ ಎಂದು ಹೇಳಿದ್ದಾರೆ. ನಂತರ ಆತ ಪಾಷಾನನ್ನು ಹಿಂಬಾಲಿಸಿ ಆತನ ಮೇಲೆ ಹಲ್ಲೆ ನಡೆಸಿದ ಪರಿಣಾಮ ಪಾಷಾ ಗಾಯಗೊಂಡು ಸಾವನ್ನಪ್ಪಿದ್ದಾನೆ. ಪಾಷಾ ಅವರ ಇಬ್ಬರು ಸಹಚರರೂ ಗಾಯಗೊಂಡಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ...