ರಾಮನಗರ | ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆ; ಸ್ಥಳೀಯರ ಆಕ್ರೋಶ

Date:

ರಸ್ತೆಗಳು ಗುಂಡಿಯಿಂದ ಕೂಡಿದ್ದು, ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದೆ. ಮಳೆ ಬಂತೆಂದರೆ ರಸ್ತೆಯಲ್ಲ ಕೆರೆಯಂತಾಗುತ್ತದೆ ಎಂದು ರಾಮನಗರ ಜಿಲ್ಲೆ ಕುದೂರು ವ್ಯಾಪ್ತಿಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

“ಸೋಲೂರು ಗ್ರಾಮದಿಂದ ಒಂಬತ್ತನಗುಂಟೆ ಗ್ರಾಮದವರೆಗೆ ವಿಸ್ತರಿಸಿರುವ ರಸ್ತೆ ಗುಂಡಿಯಿಂದ ಕೂಡಿದ್ದು, ಅಸ್ತವ್ಯಸ್ತವಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ. ತುಮಕೂರು, ಕುದೂರು, ಶಿವಗಂಗೆ ವೀರಾಪುರ ಗ್ರಾಮಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಸಂಚಾರಕ್ಕೆ ಯೋಗ್ಯವಲ್ಲದಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಸೋಲೂರು ಹೋಬಳಿ ಮಾಗಡಿ ತಾಲೂಕಿಗೆ ಸೇರುತ್ತದೆ. ಆದರೆ, ವಿಧಾನಸಭೆ ಚುನಾವಣೆ ನೆಲಮಂಗಲ ಕ್ಷೇತ್ರಕ್ಕೆ ಸೇರುತ್ತದೆ. ಲೋಕಸಭಾ ಕ್ಷೇತ್ರ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸೇರುತ್ತದೆ. ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಇಂತಹ ಅತಂತ್ರ ಸ್ಥಿತಿಯಲ್ಲಿರುವ ಹೋಬಳಿಯನ್ನು ಜನಪ್ರತಿನಿಧಿಗಳು ನಿರ್ಲಕ್ಷಿಸಿದ್ದಾರೆ” ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಳೆದ ವರ್ಷ ಇದೇ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ನುಗ್ಗಿತ್ತು. ಗುಂಡಿಗಳ ನಡುವೆ ರಸ್ತೆ ಇದೆಯೋ, ರಸ್ತೆಯ ನಡುವೆ ಗುಂಡಿಗಳಿವೆಯೋ ಎಂಬ ಗೊಂದಲದಲ್ಲಿ ವಾಹನ ಸವಾರರು ವಾಹನ ಚಲಾಯಿಸುವಂತಾಗಿದೆ. ಈ ರಸ್ತೆಯಲ್ಲಿ ಓಡಾಡುವ ನೂರಾರು ವಾಹನಗಳು, ಪ್ರಯಾಣಿಕರು ಜನಪ್ರತಿನಿಧಿಗಳನ್ನು ಹಾಗೂ  ಸಂಬಂಧಪಟ್ಟ ಇಲಾಖೆಗಳನ್ನು ಶಪಿಸದೆ ಮುಂದೆ ಹೋಗದಂತ ಸ್ಥಿತಿಯಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಲ್ಲಾ ಮಾದರಿಯ ವಸತಿ ಸಮುಚ್ಚಯ: ಮನೆಗಳ ಹಂಚಿಕೆಗೆ ಸಿದ್ಧತೆ; ಬಿಡಿಎ ಆಯುಕ್ತ ಪರಿಶೀಲನೆ

“ಗುಂಡಿಗಳಿಂದ ತುಂಬಿರುವ ಈ ರಸ್ತೆಯಲ್ಲಿ ನಿತ್ಯವೂ ನೂರಾರು ವಾಹನಗಳು ಸಂಚರಿಸುತ್ತವೆ. ಈ ರಸ್ತೆಯನ್ನು ದುರಸ್ತಿಗೊಳಿಸುವಂತೆ ಹಲವಾರು ಬಾರಿ ಸಂಬಂಧಪಟ್ಟ ಶಾಸಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನೂತನವಾಗಿ ಆಯ್ಕೆಯಾಗಿರುವ ಶಾಸಕರಾದರೂ ಈ ದುರಸ್ತಿಯನ್ನು ಕಾರ್ಯವನ್ನು ಮಾಡಬೇಕು” ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...