ರಾಮನಗರ | ಶವಸಂಸ್ಕಾರಕ್ಕೆ ದಲಿತರಿಗೆ ಅಡ್ಡಿ; ಸ್ಮಶಾನ ಭೂಮಿಗಾಗಿ ಶವವಿಟ್ಟು ಪ್ರತಿಭಟನೆ

Date:

ಶವಸಂಸ್ಕಾರ ಮಾಡಲು ಸ್ಮಶಾನ ಜಾಗ ನೀಡುವಂತೆ ಆಗ್ರಹಿಸಿ ದೇವರಹೊಸಹಳ್ಳಿ ಗ್ರಾಮದ‌ ದಲಿತ ಮುಖಂಡರು ಗುರುವಾರ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

- Advertisement -

ತಾಲೂಕಿನ ದೇವರಹೊಸಹಳ್ಳಿ ಗ್ರಾಮದ ರಾಜೇಶ ಎಂಬ ಯುವಕ ಬುಧವಾರ ಬೈಕ್ ಅಪಘಾತದಲ್ಲಿ ಸಾವಿಗೀಡಾಗಿದ್ದ. ಶವ ಸಂಸ್ಕಾರ ಮಾಡಲು‌ ಕುಟುಂಬದವರು ಶವವನ್ನು ಸ್ಮಶಾನಕ್ಕೆ‌ ತೆಗೆದುಕೊಂಡು ಹೋಗುವಾಗ ಸ್ಥಳೀಯರು ನಮ್ಮ ಜಮೀನಿನ ಮೇಲೆ ಹೋಗಬೇಡಿ ಎಂದು ಅಡ್ಡಿಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸ್ಮಶಾನಕ್ಕೆ ಹೋಗಲು ಜಾಗವಿಲ್ಲದ‌ ಕಾರಣ ಕುಪಿತಗೊಂಡ ಗ್ರಾಮಸ್ಥರು ಶವ ಮತ್ತು ಸೌದೆಯೊಂದಿಗೆ ಚನ್ನಪಟ್ಟಣಕ್ಕೆ ತೆರಳಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, “ಜಿಲ್ಲಾಧಿಕಾರಿ ಸ್ಥಳಕ್ಕೆ‌ ಬರಬೇಕು. ‌ಗ್ರಾಮದ ದಲಿತರಿಗೆ ಸ್ಮಶಾನ ಭೂಮಿ ಕಲ್ಪಿಸಬೇಕು. ಸ್ಮಶಾನ‌ಕ್ಕೆ ಹೋಗಲು ಜಾಗ ಕೊಡಿಸದಿದ್ದರೆ, ಕಚೇರಿ ಆವರಣದಲ್ಲೇ ಶವಸಂಸ್ಕಾರ ಮಾಡಲಾಗುವುದು” ಎಂದು ಎಚ್ಚರಿಸಿದರು.

ದೇವರಹೊಸಹಳ್ಳಿ ನಿವಾಸಿ ಹನುಮಂತ ಎಂಬುವವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮೇಲ್ಜಾತಿ ವ್ಯಕ್ತಿಯೊಬ್ಬ ಗೋಮಾಳ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ದಲಿತರು ಅಲ್ಲಿ ಓಡಾಡಲು ಬಿಡುತ್ತಿರಲಿಲ್ಲ. ಈ ಕುರಿತು ಮೂರ್ನಾಲ್ಕು ಬಾರಿ ತಹಶೀಲ್ದಾರರು ಬಂದು ಜಾಗ ಪರಿಶೀಲನೆ ಮಾಡಿ, ಅವರ ಬಳಿ ಜಾಗದ ದಾಖಲೆಗಳನ್ನು ಕೇಳಿದ್ದರು. ಆಗ ಯಾವುದೇ ದಾಖಲೆಗಳಿಲ್ಲವೆಂದಿದ್ದ ಆತ ಇದೀಗ ಅಕ್ರಮವಾಗಿ ಎಲ್ಲ ದಾಖಲೆಗಳನ್ನು ಅವರ ಹೆಸರಿಗೆ ಮಾಡಿಸಿಕೊಂಡಿದ್ದು, ಗೋಮಾಳ ಭೂಮಿಯನ್ನು ತನ್ನದಾಗಿಸಿಕೊಂಡಿದ್ದಾರೆ” ಎಂದು ಹೇಳಿದರು.

“ನಿನ್ನೆ ಶವಸಂಸ್ಕಾರ ಮಾಡಲೆಂದು ಮೃತದೇಹ ಕೊಂಡೊಯ್ಯುವಾಗ ಹೊಲದ ಮೇಲೆ ಹೋಗಬೇಡಿ ಅಂತ ತಗಾದೆ ತೆಗೆದರು. ಬಳಿಕ ತಾಲೂಕು ಕಚೇರಿ ಬಳಿ ಹೋಗಿ ಶವವಿಟ್ಟು ಪ್ರತಿಭಟನೆ‌ ನಡೆಸಿದೆವು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ನರಸಿಂಹ ಮೂರ್ತಿ ದೇವರಹೊಸಹಳ್ಳಿ ಗ್ರಾಮಕ್ಕೆ‌ ಭೇಟಿ‌ ನೀಡಿ‌ ಪರಿಶೀಲನೆ ನಡೆಸಿದರು. ”ಸ್ಮಶಾನಕ್ಕೆ ‌ಜಾಗವಿದ್ದು, ಸ್ಮಶಾನಕ್ಕೆ ಹೋಗಲು ರಸ್ತೆಯಿಲ್ಲದ ಕಾರಣ ಸಮಸ್ಯೆ ಎದುರಾಗಿದೆ. ಸಮಸ್ಯೆ ಪರಿಹರಿಸುತ್ತೇವೆಂದು ಅಧಿಕಾರಿಗಳು ಭರವಸೆ ನೀಡಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು

“ಸ್ಮಶಾನಕ್ಕೆ ಜಾಗ ನೀಡುವವರೆಗೆ ನಾವು ಸ್ಥಳದಿಂದ ಕದಲುವುದಿಲ್ಲವೆಂದು ಪ್ರತಿಭಟನೆ ಮುಂದುವರೆಸಿದ್ದೆವು. ಬಳಿಕ ಪೊಲೀಸ್‌ ಅಧಿಕಾರಿಗಳು, ತಹಶೀಲ್ದಾರ್‌ ಸೇರಿದಂತೆ ಹಲವು ಮಂದಿ ಅಧಿಕಾರಿಗಳು ಗ್ರಾಮಕ್ಕೆ ಬಂದರು. ಅಧಿಕಾರಿಗಳ ಬಂದೋಬಸ್ತ್‌ನಲ್ಲಿ ಶವಸಂಸ್ಕಾರ ಮಾಡಿದೆವು. ಇದೀಗ ಒತ್ತುವರಿಯಾಗಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಿ ದಲಿತರ ಸ್ಮಶಾನಕ್ಕೆ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...