ರಾಮನಗರ | ಅಕ್ರಮ ಖಾತೆ ರದ್ದುಪಡಿಸುವಂತೆ ಆಗ್ರಹ; ಡಿಎಸ್ಎಸ್‌ನಿಂದ ಅನಿರ್ದಿಷ್ಟಾವಧಿ ಧರಣಿ

Date:

ಮೈಸೂರು-ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಂತಿರುವ ಹಂದಿಜೋಗ ಸಮುದಾಯದ ಜಾಗದ ತಲೆಬಾಗಿಲಿನಲ್ಲಿರುವ 30×40 ಜಾಗವನ್ನು ಅಪರಿಚಿತ ವ್ಯಕ್ತಿ ಅಕ್ರಮವಾಗಿ ಖಾತೆ ಮಾಡಿಸಿಕೊಂಡಿರುವುದನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಡಿಎಸ್‌ಎಸ್‌ನಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.

- Advertisement -

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಮನಗರ ಜಿಲ್ಲಾ ಸಮಿತಿಯ ಮುಂದಾಳತ್ವದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಧರಣಿಯಲ್ಲಿ ಜಿಲ್ಲಾ ಪ್ರಧಾನ ಸಂಚಾಲಕ ಪುನೀತ್ ರಾಜ್ ಮಾತನಾಡಿ, “ಪಟ್ಟಣದ ಅರ್ಕಾವತಿ ಬಡಾವಣೆಯ 1ನೇ ವಾರ್ಡಿನಲ್ಲಿರುವ 157ನೇ ಸರ್ವೆ ನಂಬರಿನ ಸರ್ಕಾರಿ ಗೋಮಾಳದಲ್ಲಿ 16.5 ಗುಂಟೆಯಲ್ಲಿ ಹಂದಿಜೋಗ ಸಮುದಾಯದ 15 ಕುಟುಂಬಗಳು ಮೂರು ತಲೆಮಾರುಗಳಿಂದ ಹಂದಿಗಳನ್ನು ಸಾಕಿಕೊಂಡು ವಾಸವಾಗಿದ್ದಾರೆ. ಈ ಜಾಗವನ್ನು ಅಪರಿಚಿತ ವ್ಯಕ್ತಿಯೊಬ್ಬ ಅನಧಿಕೃತವಾಗಿ ಖಾತೆ ಮಾಡಿಸಿಕೊಂಡಿರುವುದಲ್ಲದೆ, ಓಡಾಡಲು ಜಾಗವಿಲ್ಲದಂತೆ ತಡೆಗೋಡೆ ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಅಕ್ರಮ ಖಾತೆ ರದ್ದುಗೊಳಿಸಿ, ಒತ್ತುವರಿ ತೆರವುಗೊಳಿಸಬೇಕು. ಇಲ್ಲಿನ ನಿವಾಸಿಗಳಿಗೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ಡಿಎಸ್‌ಎಸ್‌ 1 1

“ಪ್ರತಿಭಟನಾ ನಿರತ ಸ್ಥಳಕ್ಕೆ ಖುದ್ದು ಜಿಲ್ಲಾಧಿಕಾರಿಗಳೇ ಬಂದು, ನಮ್ಮ ಅಹವಾಲು ಸ್ವೀಕರಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ನಮ್ಮ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ. ಜಿಲ್ಲಾಧಿಕಾರಿಗಳು ಕಚೇರಿಗೆ ಹೋಗುವಾಗ, ಬರುವಾಗ ಧರಣಿ ನಿರತ ಸ್ಥಳದ ಮುಂದೆ ಹೋಗಬೇಕು. ಆದರೂ ಯಾಕೆ ನಮ್ಮ ಸಮಸ್ಯೆಯನ್ನು ಕೇಳುತ್ತಿಲ್ಲ. ಅವರೂ ಕೂಡ ಅಸ್ಪೃಶ್ಯತೆ ಆಚರಿಸುತ್ತಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಡಿಎಸ್‌ಎಸ್‌ 2

“ನಾಲ್ಕು ದಿನಗಳ ಹಿಂದೆಯೇ ನಮ್ಮ ಸಮಸ್ಯೆ ಕೇಳಬೇಕೆಂದು ಮನವಿ ಮಾಡಿದ್ದರೂ ಕೂಡ ತಿರುಗಿ ನೋಡದ ಜಿಲ್ಲಾಧಿಕಾರಿಗಳ ನಡೆ ಸರಿಯಾದುದಲ್ಲ. ನಗರಸಭೆಯಲ್ಲಿ ಯಾರಿಗೆ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿದೆಯೆಂದು ಪತ್ತೆಹಚ್ಚಿ ಅಕ್ರಮ ಖಾತೆ ರದ್ದುಪಡಿಸಬೇಕು. ಅಕ್ರಮವಾಗಿ ಖಾತೆ ಮಾಡಿದ ನಗರಸಭಾ ಅಧಿಕಾರಿಗಳ ಎದುರು ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು. ಈ ಜಮೀನಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆಯಿದೆ. ಇದನ್ನು ತಿಳಿದಿದ್ದರೂ ಕೂಡ ಕಾಂಪೌಂಡ್ ಹಾಕಿಕೊಳ್ಳಲು ರಕ್ಷಣೆ ನೀಡಿದ ಇನ್ಸ್‌ಪೆಕ್ಟರ್‌ ಕೃಷ್ಣ ಹಾಗೂ ಸಿಬ್ಬಂದಿಗಳನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಜರ್ಮಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ; ಪಿಡಿಒಗೆ ಗ್ರಾಮಸ್ಥರ ಛೀಮಾರಿ

ಡಿಎಸ್ಎಸ್‌ನ ಬೆಂಗಳೂರು ವಿಭಾಗಿಯ ಸಂಚಾಲಕ ಸೋಮಶೇಖರ್ ಪಿ, ಜಿಲ್ಲೆ ಹಾಗೂ ತಾಲೂಕು ಸಮಿತಿಯ ಪದಾಧಿಕಾರಿಗಳಾದ ಶಿವು ಜಗದಾಪುರ, ವಿಶ್ವ, ದೊರೆಸ್ವಾಮಿ, ಬಿಡದಿಯ ಶಿವಕುಮಾರ, ಭೀಮ್ ಆರ್ಮಿಯ ಪರಮೇಶ್, ಕೇತುಹಳ್ಳಿ ನವೀನ್, ಎಸ್‌ಎಸ್‌ಡಿ ಸುರೇಶ್, ವಿನೋದ, ಭಾರತ್, ಭೀಮ್ ಸೇನೆಯ ದಿನೇಶ್, ಕನಕಪುರ ಶಿವಲಿಂಗಯ್ಯ, ಡಿಎಸ್ಎಸ್ ಸಂಯೋಜಕ ವಿನಯ್, ಗಾಯಕರಾದ ಬ್ಯಾಡರಹಳ್ಳಿ ಶಿವಕುಮಾರ್, ಬಿಎಸ್‌ಪಿಯ ರಾಮಣ್ಣ ಹಾಗೂ ಅರ್ಕಾವತಿ ಬಡಾವಣೆಯ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...