ರಾಮನಗರ | ಪುನೀತ್ ಕೆರೆಹಳ್ಳಿ ಪರಾರಿಯಾಗಿದ್ದಾನೆ; ಪತ್ತೆಗಾಗಿ ತಂಡ ರಚಿಸಿದ್ದೇವೆ: ಎಸ್‌ಪಿ

Date:

  • ಇದ್ರೀಸ್‌ ಸಾವು ಪ್ರಕರಣದ ಪ್ರಮುಖ ಆರೋಪಿ ಪುನೀತ್‌ ಕೆರೆಹಳ್ಳಿಗಾಗಿ ಶೋಧ
  • ಸಾತನೂರು ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲು

ಇದ್ರೀಸ್ ಪಾಷ ಸಾವಿನ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆ ಮರೆಸಿಕೊಂಡಿದ್ದಾನೆ. ಆತನನ್ನು ಪತ್ತೆ ಮಾಡಿ, ಬಂಧಿಸಲು ತಂಡಗಳನ್ನು ರಚಿಸಿದ್ದೇವೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿ ಹೇಳಿದ್ದಾರೆ.

ರಾಮನಗರ ಜಿಲ್ಲೆ ಸಾತಾನೂರು ಬಳಿ ಇದ್ರೀಸ್‌ ಪಾಷಾ ಹತ್ಯೆ ಕುರಿತು ಮಂಗಳವಾರ ಕಾರ್ತಿಕ್‌ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಇದ್ರೀಸ್‌ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ, ಎಫ್‌ಎಸ್‌ಎಲ್ ವರದಿ ಬಂದ ಬಳಿಕವಷ್ಟೇ ಗೊತ್ತಾಗುತ್ತದೆ. ಪ್ರಕರಣದ ತನಿಖೆ ವಿಚಾರದಲ್ಲಿ ಪೊಲೀಸರಿಗೆ ಯಾವುದೇ ರಾಜಕೀಯ ಒತ್ತಡವಿಲ್ಲ” ಎಂದು ಹೇಳಿದ್ದಾರೆ.

“ಕನಕಪುರದ ವೈದ್ಯರ ತಂಡವು ಇದ್ರೀಸ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ಎಸ್‌ಎಲ್‌ ವರದಿಯನ್ನೂ ಪಡೆಯಲಾಗುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ |ನಾನು ತಲೆಮರೆಸಿಕೊಂಡಿಲ್ಲ; ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಬಿಟ್ಟ ಪುನೀತ್‌ ಕೆರೆಹಳ್ಳಿ

“ಪ್ರಕರಣದ ಪ್ರಮುಖ ಆರೋಪಿ ಪುನೀತ್‌ ಕೆರೆಹಳ್ಳಿ ಹಾಗೂ ಸಹಚರರ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿಯು ಇನ್ನೂ ಪತ್ತೆಯಾಗಿಲ್ಲ. ಆತನಿಗಾಗಿ ಶೋಧಕಾರ್ಯ ನಡೆಸಿದ್ದೇವೆ” ಎಂದಿದ್ದಾರೆ.

“ಪ್ರಕರಣ ಸಂಬಂಧ ಸಾತನೂರು ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದರು” ಎಂದು ತಿಳಿಸಿದ್ದಾರೆ.

“ಗೋವು ಸಂರಕ್ಷಣೆ ನೆಪದಲ್ಲಿ ನಮ್ಮ ಮೇಲೆ ದಾಳಿ ಮಾಡಿದ್ದಾರೆಂದು ಕ್ಯಾಂಟರ್‌ ಚಾಲಕ ಪ್ರತಿ ದೂರು ನೀಡಿದ್ದರು. ಮರು ದಿನ ಬೆಳಿಗ್ಗೆ 8ರ ಸುಮಾರಿಗೆ  ಘಟನೆ ನಡೆದ ಸ್ಥಳದ 100 ಮೀಟರ್‌ ದೂರದಲ್ಲಿ ಇದ್ರೀಸ್ ಅವರ ಶವ ಪತ್ತೆ ಆಗಿದ್ದು, ಅವರ ಸಹೋದರ ಯೂನುಸ್‌ ಪಾಷ ನೀಡಿದ ದೂರಿನ ಅನ್ವಯ ಮತ್ತೊಂದು ಎಫ್‌ಐಆರ್‌ ದಾಖಲಿಸಿದ್ದೇವೆ” ಎಂದು ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಳಗಾವಿ | ಇಂಗ್ಲಿಷ್‌ ಬ್ಯಾನರ್ ಹರಿದು ಕರವೇ ಕಾರ್ಯಕರ್ತರ ಆಕ್ರೋಶ; ವಶಕ್ಕೆ ಪಡೆದ ಪೊಲೀಸರು

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮಂಡ್ಯ | ರಸ್ತೆಯಲ್ಲಿ ಸಂಚರಿಸುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಬೈಕ್​​ನಲ್ಲಿ ಬಂದು ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ...