ರಾಮನಗರ | ಕ್ಯಾಸಲ್‌ರಾಕ್ ಕ್ರಾಸ್ ಬಳಿ ಭೀಕರ ಅಪಘಾತ; ಎರಡು ಟ್ರಕ್‌ಗಳ ಮುಖಾಮುಖಿ ಡಿಕ್ಕಿ

Date:

ರಾಮನಗರ: ಗೋವಾ–ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಅನಮೋಡ್ ಸಮೀಪದ ಕ್ಯಾಸಲ್‌ರಾಕ್ ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಸರಕು ಸಾಗಣೆ ಟ್ರಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದು, ಎರಡೂ ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ಗೋವಾ ಕಡೆಗೆ ತೆರಳುತ್ತಿದ್ದ ಟ್ರಕ್‌ವೊಂದು ಹಾಗೂ ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಮತ್ತೊಂದು ಟ್ರಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ತೀವ್ರತೆಗೆ ಎರಡೂ ಟ್ರಕ್‌ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕರು ವಾಹನಗಳೊಳಗೆ ಸಿಲುಕಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಪರ್ಷಿಯನ್ ಬೋಟ್‌ ಬೆಂಕಿಗಾಹುತಿ: ರೂ. 30 ಲಕ್ಷಕ್ಕೂ ಅಧಿಕ ನಷ್ಟ

ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ವಾಹನಗಳಿಂದ ಹೊರತೆಗೆದು ಆಂಬುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ಸಾಗಿಸಿದರು. ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ರಾಮನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಿದರು.ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಕುರಿತು ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...