ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕವಣಾಪುರದ ಪಟ್ಟಲದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನವೆಂಬರ್ 3ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ.
ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ, ಕಸ್ತೂರಿ ಕನ್ನಡಪರ ಸಂಘಟನೆಗಳ ಒಕ್ಕೂಟ, ಕವಣಾಪುರ ಹಾಗೂ ಸುತ್ತಮುತ್ತಲಿನ ಸಮಸ್ತ ಗ್ರಾಮದ ಯಜಮಾನರು, ಮುಖಂಡರು ಹಾಗೂ ಯುವಜನರ ಸಂಯುಕ್ತಾಶ್ರಯದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | 2ಎ ಮೀಸಲಾತಿಗಾಗಿ ಬೆಂಗಳೂರಿನಲ್ಲಿ ಧರಣಿ: ಬಸವ ಮೃತ್ಯುಂಜಯ ಸ್ವಾಮೀಜಿ
ಸರಳ ವಿವಾಹವಾಗಬಯಸುವ ಗಂಡಿಗೆ 21 ವರ್ಷ ಮತ್ತು ಹೆಣ್ಣಿಗೆ 18 ವರ್ಷ ತುಂಬಿರಬೇಕು. 2ನೇ ಮದುವೆಗೆ ಅವಕಾಶವಿರುವುದಿಲ್ಲ. ವಾಸಸ್ಥಳದ ದೃಢೀಕರಣ ಪತ್ರ ನೀಡಬೇಕು, ಆಧಾರ್ ಕಾರ್ಡ್ ಕಡ್ಡಾಯ, 4 ಭಾವಚಿತ್ರ ಮತ್ತು ಶಾಲೆ ವರ್ಗಾವಣೆ ಪತ್ರ ನೀಡಬೇಕು. ವಧು-ವರರ ತಂದೆ- ತಾಯಿಗಳ ಒಪ್ಪಿಗೆ ಪತ್ರ ಸಲ್ಲಿಸಬೇಕು. ದಾಖಲಾತಿಗಳ ಜ಼ೆರಾಕ್ಸ್ ಪ್ರತಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೆಂಕಟೇಶ್ ಅವರ ಮೊ.7411678814, 9686840493ಗೆ ಸಂಪರ್ಕಿಸಲು ಕೋರಲಾಗಿದೆ.