ರಾಮನಗರ | ಚುನಾವಣೆ ವೇಳೆ ಹಂಚಿದ್ದ ಕುಕ್ಕರ್‌ ಸ್ಪೋಟ; ಬಾಲಕಿಗೆ ಗಂಭೀರ ಗಾಯ

Date:

ಚುನಾವಣೆ ಸಮಯದಲ್ಲಿ ಹಂಚಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿಯೊಬ್ಬಳು ಗಂಭೀರ ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಗಾಯಾಳು ಬಾಲಕಿ ಮಹಾಲಕ್ಷ್ಮಿ(17) ಶುಕ್ರವಾರ ಬೆಳಗ್ಗೆ ಅನ್ನ‌ ಮಾಡಲೆಂದು ಕುಕ್ಕರ್‌ಗೆ ಅಕ್ಕಿ ಹಾಕಿದ್ದಾಳೆ. ಸ್ಟವ್‌ ಮೇಲೆ ಇಟ್ಟ ಸ್ವಲ್ಪ ಸಮಯದಲ್ಲೇ ಕುಕ್ಕರ್‌ ಸ್ಫೋಟಗೊಂಡಿದೆ. ಕುಕ್ಕರ್‌ ಸಿಡಿದ ಪರಿಣಾಮ ಬಾಲಕಿಯ ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳು ಬಾಲಕಿಯನ್ನು ರಾಮನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲುಷಿತ ನೀರು ಕುಡಿದು 30 ಮಂದಿ ಅಸ್ವಸ್ಥ

“ವಿಧಾನಸಭೆ ಚುನಾವಣೆ ವೇಳೆ ಅಭ್ಯರ್ಥಿಯೊಬ್ಬರು ಮನೆ ಮನೆಗೆ ಕುಕ್ಕರ್‌ ಹಂಚಿದ್ದರು. ಚುನಾವಣೆಯಲ್ಲಿ ನೀಡಿದ್ದ ಕುಕ್ಕರ್‌ನಲ್ಲಿ ಅಡುಗೆ ಮಾಡಲು ಹೋಗಿ ಈ ಅವಘಡ ನಡೆದಿದೆ. ಕಳಪೆ ಕುಕ್ಕರ್‌ ನೀಡಿದ್ದರಿಂದ ಅನಾಹುತ ಸಂಭವಿಸಿದೆ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...