ರಾಮನಗರ | ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ

Date:

ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಅವರನ್ನು ರಾಮನಗರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.

- Advertisement -

ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾವಣೆ ಮಾಡಿದ್ದು, ಮಂಡ್ಯ ಜಿಲ್ಲೆಗೆ ವಿ ಅನ್ಬುಕುಮಾರ್ ಹಾಗೂ ರಾಮನಗರ ಜಿಲ್ಲೆಗೆ ವಿ ರಶ್ಮಿ ಮಹೇಶ್ ಅವರನ್ನು ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

2023ರ ಡಿಸೆಂಬರ್‌ನಲ್ಲಿ ಸರ್ಕಾರ ಹಲವು ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಈಗ ಅದನ್ನು ಬದಲಾವಣೆ ಮಾಡಿ, ಆದೇಶ ಹೊರಡಿಸಿದೆ.

ಅನ್ಬುಕುಮಾರ್‌
ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ದರ್ಶಿಯಾಗಿ ಅನ್ಬುಕುಮಾರ್‌ ನೇಮಕ

ರಾಜ್ಯದ ಅಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಇವರುಗಳನ್ನು ನೇಮಕ ಮಾಡಲಾಗಿದೆ.

2023 ಡಿಸೆಂಬರ್‌ 11ರಂದು ಈ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು. ಅವರುಗಳನ್ನು ಬದಲಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಖಾಸಗಿ ಟೆಲಿಕಾಂ ಕಂಪನಿಗಳ ಮೊಬೈಲ್ ರೀಚಾರ್ಜ್‌ ಬೆಲೆ ಹೆಚ್ಚಳ; ಡಿಎಸ್ಎಸ್‌ ಖಂಡನೆ

“ಉಸ್ತುವಾರಿ ಸಚಿವರುಗಳು ಜಿಲ್ಲೆಯ ಪ್ರಮುಖ ಕಚೇರಿ/ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಾಗೂ ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ(ಕೆಡಿಪಿ) ಸಭೆಗಳಲ್ಲಿ ಕಡ್ಡಾಯವಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜೊತೆಗೆ ಹಾಜರಿದ್ದು, ಸಮನ್ವಯತೆಯೊಂದಿಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು” ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...