ರಾಮನಗರ | ಮನೆ, ಮನಗಳಲ್ಲಿ ನಿತ್ಯವೂ ಕನ್ನಡ ಆಚರಿಸುವ ದೀಕ್ಷೆ ತೊಡಬೇಕು: ಎ ಆರ್ ಗೋವಿಂದಸ್ವಾಮಿ

Date:

ಮನೆ, ಮನಗಳಲ್ಲಿ ನಿತ್ಯವೂ ಕನ್ನಡ ತನವನ್ನು ಆಚರಿಸುವ ದೀಕ್ಷೆ ತೊಡಬೇಕು. ಕನ್ನಡವನ್ನು ಭಾಷಾ ದೃಷ್ಟಿಕೋನದಿಂದಲ್ಲದೇ ಒಗ್ಗಟ್ಟು, ಸಂಸ್ಕೃತಿ, ಗೌರವ ಮತ್ತು ಅಭಿಮಾನದ ಪ್ರತೀಕವಾಗಿ ಕಾಣುವ ಮೂಲಕ ಕನ್ನಡವನ್ನು ಆಚರಿಸಬೇಕು ಎಂದು ಬಂಜಾರ ಭಾಷಾ ಸಂಸ್ಕೃತಿ ಮತ್ತು ಅಕಾಡೆಮಿಯ ಅಧ್ಯಕ್ಷ, ಅಂತಾರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಡಾ. ಎ ಆರ್ ಗೋವಿಂದಸ್ವಾಮಿ ತಿಳಿಸಿದರು.

- Advertisement -

ರಾಮನಗರದ ನ್ಯೂಎಕ್ಸ್‌ಪರ್ಟ್ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ, ಕನ್ನಡ ಹಬ್ಬ, ಮಕ್ಕಳ ದಿನಾಚರಣೆ ಹಾಗೂ ಎನ್‌ಎಸ್‌ಎಸ್ ಘಟಕದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಪಠ್ಯೇತರ ಚಟುವಟಿಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸುಜ್ಞಾನ ಸಂಪಾದನೆಗೂ ಒತ್ತು ಕೊಡಬೇಕು. ನಿರಂತರ ಅಧ್ಯಯನ ಶೀಲತೆ, ಸೃಜನಶೀಲತೆ, ಸಮಾಜ ಸೇವಾ ಮನೋಭಾವ, ರಾಷ್ಟ್ರಾಭಿಮಾನ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಯುವಜನರು ಈ ನೆಲದ ಅಸ್ತಿತ್ವ ಗಟ್ಟಿಗೊಳಿಸುವ ನಾಯಕರಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

IMG 20241201 WA0026

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲ ಡಾ. ಡಿ ಆರ್ ರವಿಕುಮಾರ್ ಮಾತನಾಡಿ, “ವಿದ್ಯಾರ್ಥಿಗಳು ಉನ್ನತ ಭವಿಷ್ಯವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಕಟ್ಟಿಕೊಳ್ಳುವ ಸಂಕಲ್ಪ ಮಾಡಬೇಕು. ಮಾತೃಭಾಷೆಯನ್ನು ಆರಾಧಿಸುವ, ಪ್ರೀತಿಸುವ ದೃಢಸಂಕಲ್ಪ ಮಾಡಬೇಕು” ಎಂದರು.

ರಾಮನಗರ ಕಸಾಪ ಅಧ್ಯಕ್ಷ ಬಿ ಟಿ ದಿನೇಶ್ ಬಿಳಗುಂಬ, ಚುಟುಕು ಕವಿ ಪೂರ್ಣಚಂದ್ರ, ಹಿರಿಯ ಗಾಯಕ ಚೌ ಪು ಸ್ವಾಮಿ, ಸಾಹಿತಿ ಡಾ ವಿಜಯ್ ರಾಂಪುರ, ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್‌ನ ಚಂದ್ರೇಗೌಡ ಮಾತನಾಡಿದರು.

ಇದನ್ನು ಓದಿದ್ದೀರಾ? ದೆಹಲಿ ಪೊಲೀಸರಿಂದ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆ : ದೂರು ದಾಖಲು

ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಆರ್ ಚಂದ್ರಶೇಖರ್, ಸಹಾಯಕ ಪ್ರಾಧ್ಯಾಪಕರಾದ ದಯಾನಂದ ಸ್ವಾಮಿ, ಸುಮತಿಶ್ರೀ ಹಾಗೂ ಉಪನ್ಯಾಸಕ ವೃಂದದವರು ಇದ್ದರು.

ಕಾರ್ಯಕ್ರಮದ ಆರಂಭಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನೂರು ಅಡಿ ಉದ್ದದ ಕನ್ನಡ ಧ್ವಜ ಹಿಡಿದು ಕಲಾ ತಂಡಗಳೊಂದಿಗೆ ಗಣ್ಯರನ್ನು ವೇದಿಕೆಗೆ ಕರೆತರಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...