ರಾಮನಗರ | ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯುತ್ಸವ

Date:

Advertisements

“ಬೆಂಗಳೂರು ಸ್ಥಾಪಕ, ನಮ್ಮೆಲ್ಲರ ನಾಡ ದೊರೆ ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಮುಂದಿನ ಭವಿಷ್ಯದ ಯುವ ಪೀಳಿಗೆಗೆ ಹೆಚ್ಚು ತಿಳಿಸುವಂತಾಗಬೇಕು” ಎಂದು ಬಿಳಗುಂಬ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ನವೀನ್‌ಗೌಡ ಬಿಳಗುಂಬ ಹೇಳಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಅಭಿಮಾನಿಗಳು ಬಳಗ ಮತ್ತು ಹಿರಿಯ ವಿದ್ಯಾರ್ಥಿಗಳ ವತಿಯಿಂದ ಹಮ್ಮಿಕೊಂಡಿದ್ದ 515ನೇ ನಾಡ ಪ್ರಭು ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪರಿಸರ ಪ್ರೇಮಿ ಬಿ.ಟಿ.ರಾಜೇಂದ್ರ, “ಕೆಂಪೇಗೌಡರ ಕುರಿತು ಪ್ರತಿ ಶಾಲಾ ಹಂತದಲ್ಲೂ ತಿಳಿಸಬೇಕಿದೆ. ಮಕ್ಕಳಿಗೆ ಅವರು ಕಟ್ಟಿದ ಕೆರೆಗಳು, ಕೋಟೆಗಳು ಮತ್ತು ಪೇಟೆಗಳ ಬಗ್ಗೆ ಅರಿವು ಮೂಡಿಸಬೇಕು” ಎಂದರು.

Advertisements

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬಿ.ಟಿ.ದಿನೇಶ್ ಬಿಳಗುಂಬ ಮಾತನಾಡಿ, “ನಾಡಪ್ರಭು ಕೆಂಪೇಗೌಡರ ಸೇವೆ ಅನನ್ಯ. ಅವರು ನಿರ್ಮಿಸಿದ ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದಿದೆ. ಅವರು ಪ್ರತಿ ವರ್ಗದವರಿಗೂ ಪೇಟೆಗಳನ್ನು ಸ್ಥಾಪಿಸಿದ್ದಾರೆ. ಅವರು ನಿರ್ಮಿಸಿದ ಕೆರೆಗಳು ಕೆಲವು ಕಣ್ಮರೆಯಾಗಿವೆ. ಅವಕ್ಕೆ ಮರುಜೀವ ನೀಡಿದರೆ ಉತ್ತಮವಾಗಿರುತ್ತದೆ” ಎಂದು ತಿಳಿಸಿದರು.

WhatsApp Image 2024 08 09 at 10.04.14 PM

ಅತಿಥಿಗಳಾಗಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಹೇಶ್‌ ಮಾತನಾಡಿ, “ಕೆಂಪೇಗೌಡರು ಎಲ್ಲರೂ ರಾಜರಾದರೆ ಅವರು ನಾಡದೊರೆ, ಧರ್ಮ ರತ್ನಾಕರ ಎಂದೆನಿಸಿಕೊಂಡರು. ಅವರಂತೆ ನಾವು ಮಾದರಿಯಾಗಬೇಕು. ಊರಿನ ಶಾಲೆಗೆ ಬೇಕಾದ ಸವಲತ್ತುಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ” ಎಂದರು.

ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕೆಂಚೀಗೌಡ, ಪಶು ವೈದ್ಯ ಮಲ್ಲೇಶ್, ಮುಖ್ಯ ಶಿಕ್ಷಕಿ ಲತಾ, ಬಿ.ಟಿ.ರಾಮಯ್ಯ, ಮಹದೇವಣ್ಣ, ರಾಜಣ್ಣ, ಕನ್ನಡ ಪಾಕಶಾಲೆ ಅನಿಲ್ ಮತ್ತು ತಂಡ , ತಿಮ್ಮಣ್ಣ, ಭಾಗ್ಯಮ್ಮ.

ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಎಲ್ಲಾ ಮಕ್ಕಳಿಗೂ ಹಿರಿಯ ವಿದ್ಯಾರ್ಥಿಗಳು ಹಾಗೂ ದಾನಿಗಳಿಂದ ಸಂಗ್ರಹಿಸಿದ ಧ್ವನಿವರ್ಧಕ, ಟೈ, ಬೆಲ್ಟ್, ಐ.ಡಿ.ಕಾರ್ಡ್, ಶೂ, ಸಾಕ್ಸ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನವೀನ್‌ಗೌಡ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಹೇಶ್‌ರನ್ನು ಕೆಂಪೇಗೌಡರ ಅಭಿಮಾನಿಗಳು ಬಳಗ ಬಿಳಗುಂಬ ಹಾಗೂ ಶಾಲಾ ವತಿಯಿಂದ ಗೌರವಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಯೋಗಾನಂದ ಅಧ್ಯಕ್ಷತೆ ವಹಿಸಿದ್ದರು. ನೇಗಿಲಯೋಗಿ ಟ್ರಸ್ಟಿನ ಕಾರ್ಯದರ್ಶಿ ಅರುಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಉಮೇಶ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X