ರಾಮನಗರ | ನಾಪತ್ತೆಯಾಗಿದ್ದ ಬಾಲಕ; ನದಿಯಲ್ಲಿ ಶವ ಪತ್ತೆ

Date:

ಎರಡು ದಿನದ ಹಿಂದೆ ಕಾಣೆಯಾಗಿದ್ದ ರಾಮನಗರದ ವಿನಾಯಕ ನಗರದ ಬಾಲಕ ಕಿಶೋರ್‌ (14) ಶವ, ನಗರದ ಹೊರವಲಯದ ದ್ಯಾವರಸೇಗೌಡನ ದೊಡ್ಡಿ ಬಳಿ ಅರ್ಕಾವತಿ ನದಿಯಲ್ಲಿ ಪತ್ತೆಯಾಗಿದೆ.

- Advertisement -

ಎಂಟನೇ ತರಗತಿಯಲ್ಲಿ ಓದುತ್ತಿದ್ದ ಕಿಶೋರ್ ಭಾನುವಾರ ರಜೆ ಇದ್ದಿದ್ದರಿಂದಾಗಿ ಸ್ನೇಹಿತರೊಂದಿಗೆ ಹೊರಗಡೆ ಆಟವಾಡಲು ಹೋಗಿದ್ದ. ಮಗ ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಗಾಬರಿಗೊಂಡಿದ್ದ ಕುಟುಂಬದವರು, ಸ್ನೇಹಿತರು ಮತ್ತು ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೆ, ಎಲ್ಲೂ ಆತನ ಸುಳಿವು ಸಿಕ್ಕಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಟವಾಡಲು ತೆರಳಿದ್ದ ಕಿಶೋರ್ ಎಲ್ಲೂ ಸಿಗದಿದ್ದರಿಂದ ಆತಂಕಗೊಂಡಿದ್ದ ಪೋಷಕರು, ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಆತನ ಸ್ನೇಹಿತರನ್ನು ವಿಚಾರಿಸಿದಾಗ ಅರ್ಕಾವತಿ ನದಿಯಲ್ಲಿ ಭಾನುವಾರ ಮಧ್ಯಾಹ್ನ ಈಜಲು ತೆರಳಿದ್ದಾಗ ಮುಳುಗಿ ಮೃತಪಟ್ಟಿರುವುದಾಗಿ ಬಾಯಿಬಿಟ್ಟಿದ್ದಾರೆಂದು ರಾಮನಗರ ಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಿದ್ದಗಂಗಾ ಮಠದ ಗೋಕಟ್ಟೆಯಲ್ಲಿ ಮುಳುಗಿ ನಾಲ್ವರು ಸಾವು

“ಸ್ನೇಹಿತರೆಲ್ಲರೂ ಒಟ್ಟಿಗೆ ನೀರಿನಲ್ಲಿ ಈಜುತ್ತಿದ್ದಾಗ, ಕಿಶೋರ್ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗತೊಡಗಿದ್ದನ್ನು ಕಂಡು ಗಾಬರಿಗೊಂಡ ಸ್ನೇಹಿತರು ಸ್ಥಳದಿಂದ ಕಾಲ್ಕಿತ್ತಿದ್ದರು. ಆತನ ಸಾವಿನ ವಿಷಯ ಗೊತ್ತಾದ ಬಳಿಕ, ನದಿಯಲ್ಲಿ ಹುಡುಕಾಟ ನಡೆಸಿ ಕಿಶೋರ್ ಶವವನ್ನು ಹೊರ ತೆಗೆಯಲಾಯಿತು” ಎಂದು ಪೊಲೀಸರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...