ರಾಮನಗರ ಜಿಲ್ಲೆ ಸಾತನೂರು ಬಳಿ ಇದ್ರೀಸ್ ಪಾಷಾ ಸಾವಿನ ಪ್ರಕರಣದಲ್ಲಿ ಭಾಗಿಯಾಗಿದ್ದ ಪುನೀತ್ ಕೆರೆಹಳ್ಳಿ ಮತ್ತು ತಂಡವನ್ನು ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ʼಕೊನೆಗೂ ಬೆಕ್ಕು ಮತ್ತು ಇಲಿ ಆಟ ಮುಗಿದಿದೆʼ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅಲೋಕ್ ಕುಮಾರ್, “ರಾಮನಗರ ಎಸ್‌ಪಿ ಮತ್ತು ತಂಡ ಆರೋಪಿಗಳನ್ನು ಬಂಧಿಸುವಲ್ಲಿ ನಿರಂತರ ಪ್ರಯತ್ನ ಮಾಡಿರುವುದಕ್ಕಾಗಿ ಅಭಿನಂದನೆಗಳು” ಎಂದು ಶ್ಲಾಘಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಇದ್ರೀಸ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣ: ರಾಜಸ್ಥಾನದಲ್ಲಿ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ
“ಯಾವುದೇ ಪಕ್ಷಪಾತವಿಲ್ಲದೆ ಸಮರ್ಪಕ ತನಿಖೆ ನಡೆಸಿ, ಸೂಕ್ತ ನ್ಯಾಯ ದೊರಕಿಸಲಾಗುವುದು” ಎಂದು ಖಚಿತಪಡಿಸಿದ್ದಾರೆ.