ರಾಮನಗರ | ರೆಕಾರ್ಡ್‌ ರೂಂ ದಾಖಲೆಗಳು ಡಿಜಿಟಲೀಕರಣವಾಗುತ್ತಿವೆ: ಜಿಲ್ಲಾಧಿಕಾರಿ

Date:

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಚೇರಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ರೆಕಾರ್ಡ್ ರೂಂನಲ್ಲಿದ್ದ ಪತ್ರಗಳನ್ನು ಈಗ ಡಿಜಿಟಲೀಕರಣ ಮಾಡಲಾಗುತ್ತಿದೆ. ಮೂರು ತಿಂಗಳೊಳಗೆ ಪ್ರತಿಯೊಂದು ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡಿ ಸರ್ಕಾರದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

- Advertisement -

ಮಾಗಡಿ ತಾಲೂಕು ಕಚೇರಿಯಲ್ಲಿ ಶನಿವಾರ ದಾಖಲಾತಿಗಳ ಸ್ಕ್ಯಾನಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಇಂದಿನಿಂದ ಮೂರು ತಿಂಗಳ ಕಾಲ ಸತತವಾಗಿ ರೆಕಾರ್ಡ್ ರೂಂನಲ್ಲಿರುವ ಎಲ್ಲ ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡಿ ಸರ್ಕಾರದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುವ ಕೆಲಸವನ್ನು ಮಾಡಲು ಈಗ ಐದು ಸ್ಕ್ಯಾನರ್‌ಗಳನ್ನು ತರಿಸಲಾಗಿದೆ. ಸೋಮವಾರದ ಬಳಿಕ ಮತ್ತೆ ಐದು ಸ್ಕ್ಯಾನರ್‌ಗಳು ಬರಲಿದ್ದು, 10 ಸ್ಕ್ಯಾನರ್‌ಗಳ ಮೂಲಕ ತರಬೇತಿ ಪಡೆದಿರುವ ಕಂಪ್ಯೂಟರ್ ಆಪರೇಟರ್‌ಗಳ ಮೂಲಕ ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರತಿದಿನ ಅವರಿಗೆ 5,000 ಪ್ರತಿಗಳ ಸ್ಕ್ಯಾನಿಂಗ್ ಮಾಡುವ ಗುರಿಯನ್ನು ಕೊಡಲಾಗಿದ್ದು, ಸಾರ್ವಜನಿಕರು ಈ ಸಮಯದಲ್ಲಿ ಅಧಿಕಾರಿಗಳ ಜೊತೆ ಸ್ಪಂದಿಸುವ ಕೆಲಸ ಮಾಡಬೇಕು. ಈ ದಾಖಲಾತಿಗಳು ಸ್ಕ್ಯಾನಿಂಗ್ ಬಳಿಕ ಯಾವುದೇ ತೊಂದರೆಗಳಿಲ್ಲದೆ ಕಂಪ್ಯೂಟರ್ ಮೂಲಕ ತಮ್ಮ ದಾಖಲಾತಿಗಳನ್ನು ಪಡೆಯಬಹುದು. ಈ ಸಮಯದಲ್ಲಿ ಸಾರ್ವಜನಿಕರು ಅಧಿಕಾರಿಗಳ ಜೊತೆ ಸೌಮ್ಯವಾಗಿ ವರ್ತಿಸಬೇಕು” ಎಂದು ಮನವಿ ಮಾಡಿದರು.

ಹಳೆಯ ದಾಖಲಾತಿಗಳು ಸಿಗಲಿವೆ: ರಾಮನಗರ ಜಿಲ್ಲೆಯಲ್ಲಿ ಹಾರೋಹಳ್ಳಿ ತಾಲೂಕಿನಲ್ಲಿ ರೆಕಾರ್ಡ್‌ಗಳನ್ನು ಸಂಪೂರ್ಣ ಸ್ಕ್ಯಾನಿಂಗ್ ಮಾಡಿಸಲಾಗಿದೆ. ಮಾಗಡಿಯಲ್ಲಿ ಕೂಡ ರೆಕಾರ್ಡ್ ರೂಂಗಳ ದಾಖಲಾತಿ ಸ್ಕ್ಯಾನಿಂಗ್ ಮಾಡುವ ಕಾರ್ಯಕ್ಕೆ ಚಾಲನೆ ದೊರೆತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿನಿಲಯದ ವಿದ್ಯಾರ್ಥಿಗಳ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

“ಸಾರ್ವಜನಿಕರು ತಮಗೆ ಬೇಕಾಗಿರುವ ಪತ್ರಗಳನ್ನು ಪಡೆಯುವುದಕ್ಕೆ ಸಾಕಷ್ಟು ಸಮಯ ಹಿಡಿಯುತ್ತಿದೆ, ಕೆಲವು ದಾಖಲಾತಿಗಳು ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಮಾಗಡಿ ತಾಲೂಕಿನಲ್ಲಿ 2.5 ಲಕ್ಷ ದಾಖಲಾತಿಗಳ ಪೈಕಿ ಪ್ರತಿಯೊಂದು ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡುವ ಸಮಯದಲ್ಲಿ ಹಳೆಯ ದಾಖಲಾತಿಗಳು ಸಿಗುವ ಸಾಧ್ಯತೆಗಳು ಇರುವುದರಿಂದ ಸಾರ್ವಜನಿಕರಿಗೆ ಅಗತ್ಯವಾದ ದಾಖಲಾತಿಗಳನ್ನು ಕೊಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ” ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಇದೇ ವೇಳೆ ತಹಶೀಲ್ದಾರ್ ಸುರೇಂದ್ರ ಮೂರ್ತಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...