ರಾಮನಗರ | ಉಪಕರಣಗಳ ಮೂಲಕ ಉದ್ಯೋಗ ಖಾತ್ರಿ ಕೆಲಸ: ಸೂಕ್ತ ಕ್ರಮಕ್ಕೆ ಮಾಹಿತಿ ಹಕ್ಕು ವೇದಿಕೆ ಒತ್ತಾಯ

Date:

Advertisements

ರಾಮನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಉಪಕರಣಗಳ ಮೂಲಕ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಆದರೂ ಕೂಡ ರಾಮನಗರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ರಾಮನಗರ ಘಟಕದ ಅಧ್ಯಕ್ಷರಾದ ಹೆಚ್.ಎಸ್. ಸ್ವಾಮಿ ಆರೋಪಿಸಿದ್ದಾರೆ.

ಈ ಬಗ್ಗೆ ರಾಮನಗರ ಸಿಇಓಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಜಿಲ್ಲಾ ವ್ಯಾಪ್ತಿ ಅತಿ ಹೆಚ್ಚು ಅಕ್ರಮಗಳು ಕಂಡು ಬರುತ್ತಿವೆ. ದೂರುದಾರರು ದೂರುಗಳನ್ನು ಸಲ್ಲಿಸಿದ ಎಷ್ಟು ದಿನಗಳಾದರೂ ತಪ್ಪಿತಸ್ಥರ ಎದುರು ಕ್ರಮವನ್ನು ತೆಗೆದುಕೊಳ್ಳಲು ತಾವು ವಿಳಂಬ ಮಾಡುತ್ತಿದ್ದೀರಿ. ಈ ವಿಳಂಬ ನಡೆ ಭ್ರಷ್ಟಾಚಾರಕ್ಕೆ ಸಹಕರಿಸಿದಂತೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೂಡಲೇ ಈ ಬಗ್ಗೆ ಈಗಾಗಲೇ ದಾಖಲಾಗಿರುವ ಎಲ್ಲ ದೂರುಗಳನ್ನು ತಾವೇ ಖುದ್ದಾಗಿ ಪರಿಶೀಲಿಸಿ ತಪ್ಪಿತಸ್ಥರ ಎದುರು ಪಂಚಾಯತ್ ರಾಜ್ ಅಧಿನಿಯಮಗಳ ಹಾಗೂ ನರೇಗಾ ಯೋಜನೆಯ ನಿಯಮಗಳಡಿ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳ ಎದುರು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

Advertisements

ರಾಮನಗರ ಜಿಲ್ಲಾ ವ್ಯಾಪ್ತಿಗೆ ಒಳಪಡುವಂತೆ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿಯೂ ಕೂಡ ಸಾಮಾಜಿಕ ಹೋರಾಟಗಾರರು ಹಾಗೂ ಮಾಹಿತಿ ಹಕ್ಕು ಕಾಯ್ದೆ ಬಳಕೆದಾರರು ಮಾಹಿತಿ ಹಕ್ಕಿನಡಿ ಅರ್ಜಿಗಳನ್ನು ಸಲ್ಲಿಸಿ ಮಾಹಿತಿಗಳನ್ನು ಪಡೆಯುವಲ್ಲಿ ವಿಫಲವಾಗುತ್ತಿದ್ದಾರೆ. ಎಲ್ಲ ಗ್ರಾಮ ಪಂಚಾಯಿತಿಯ ಪಿಡಿಒಗಳು ಹಾಗೂ ಕಾರ್ಯದರ್ಶಿಗಳು ಸರಿಯಾಗಿ ಮಾಹಿತಿಗಳನ್ನು ನೀಡುತ್ತಿಲ್ಲ ಹಾಗೂ ಮೊದಲ ಮೇಲ್ಮನವಿ ವಿಚಾರಣೆಗಳನ್ನು ನಡೆಸುತ್ತಿಲ್ಲ. ಮಾಹಿತಿ ಕಾಯ್ದೆಯನ್ನು ಹಾಗೂ ಅದರ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಈ ನಡುವೆ ಹೆಚ್ಚಾಗಿ ಕಂಡು ಬರುತ್ತಿದೆ ಎಂದರು.

ಇದನ್ನು ಓದಿದ್ದೀರಾ? ಚನ್ನಪಟ್ಟಣ | ಪ್ರತಿ ಪಂಚಾಯ್ತಿಯಲ್ಲಿ ₹2-5 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿ: ಡಿ ಕೆ ಶಿವಕುಮಾರ್

ತಾವುಗಳು ಕೂಡಲೇ ಮಾಹಿತಿ ಹಕ್ಕು ಕಾಯ್ದೆಯ ಗಂಭೀರತೆಯನ್ನು ಕೂಡಲೇ ಎಲ್ಲ ಗ್ರಾಮ ಪಂಚಾಯಿತಿಯ ಪಿಡಿಒಗಳು ಹಾಗೂ ಕಾರ್ಯದರ್ಶಿಗಳಿಗೆ ತಿಳಿಸಿ, ಅರ್ಜಿಗಳನ್ನು ಶೀಘ್ರದಲ್ಲಿ ವಿಲೇವಾರಿಗೊಳಿಸುವಂತೆ ತಿಳಿಸಬೇಕು ಹಾಗೂ ಅವರಿಗೆ ಸೂಕ್ತ ತರಬೇತಿ ಕೊಡಿಸಬೇಕು ಎಂದು ಒತ್ತಾಯಿಸಿದರು.

ಅರ್ಜಿಯನ್ನು ಸ್ವೀಕರಿಸಿ ಜಿಲ್ಲಾ ಪಂಚಾಯಿತಿ ಎಡಿ ಮಾತನಾಡಿ, ತಾವು ಕೊಟ್ಟ ದೂರನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ತಪ್ಪು ಕಂಡು ಬಂದಲ್ಲಿ ಸಂಬಂಧಿಸಿದವರ ಎದುರು ಕ್ರಮ ಕೈಗೊಳ್ಳುತ್ತೇವೆ. ನಾವು ತೆಗೆದುಕೊಂಡ ಕ್ರಮಗಳ ಬಗ್ಗೆ ತಮಗೆ ಹಿಂಬರಹವನ್ನು ನೀಡಲಾಗುವುದು ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X