ರಾಮನಗರ | ಹೊಸ ಮತದಾರರ ನೋಂದಣಿಗೆ ಅಗತ್ಯ ಕ್ರಮವಹಿಸಿ : ರಶ್ಮಿ ಮಹೇಶ್

Date:

Advertisements

ಹೊಸ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ತಹಶೀಲ್ದಾರರು, ಬಿಎಲ್‌ಓಗಳು ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೂ (ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾಮಾಜಿಕ ಭದ್ರತೆ) ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ತಿಳಿಸಿದರು.

ಅವರು ನ.15ರ ಶುಕ್ರವಾರ ನಗರದ ಜಿಲ್ಲಾ ಪಂಚಾಯಿತ್ ಮಿನಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025ರ ಸಂಬಂಧ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

IMG 20241115 WA0049

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು 2ನೇ ಪಿ.ಯು.ಸಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ವಿವರಗಳನ್ನು ಶಿಕ್ಷಣ ಇಲಾಖೆಯಿಂದ ಪಡೆದು ಅವರನ್ನು ಮತಪಟ್ಟಿಗೆ ಸೇರಿಸಲು ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಹಾಗೂ ರಾಜಕೀಯ ಪಕ್ಷಗಳ ಸಹಕಾರವೂ ಬೇಕೆಂದರು.

Advertisements

ಮತದಾರರ ಕರಡು ಪಟ್ಟಿಯನ್ನು ತಾಲೂಕು ಕಚೇರಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಹಾಗೂ ಜಿಲ್ಲಾಧಿಕಾರಿಗಳ ವೆಬ್‌ಸೈಟ್‌ನಲ್ಲಿಯೂ ಪ್ರಕಟಿಸಿಬೇಕು ಎಂದು ಸೂಚಿಸಿದರು.

ಅರ್ಹ ಮತದಾರರು ಮತದಾನದಿಂದ ಹೊರ ಉಳಿಯದಂತೆ ಕ್ರಮವಹಿಸುವುದು ಅಧಿಕಾರಿಗಳ ಕರ್ತವ್ಯ. ಆದುದರಿಂದ ಮತದಾರರಪಟ್ಟಿಗೆ ಸೇರಿಸಲು ಇನ್ನು ಕಾಲಾವಕಾಶವಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ  ಹೆಚ್ಚು ಪ್ರಚಾರ ಮಾಡಿ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ಕ್ರಮವಹಿಸುವಂತೆ ತಿಳಿಸಿದರು.

ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಿಸುವುದು, ಮರಣ ಹೊಂದಿದವರನ್ನು ಮತಪಟ್ಟಿಯಿಂದ ಕೈಬಿಡಲು ಕ್ರಮವಹಿಸುವಂತೆ ತಿಳಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಯಾಂಜೋ ಆಸ್ಪತ್ರೆಯ ಹಿಂಭಾಗದ ಸ್ಥಳ ನಿಗದಿ: ಸಚಿವ ಚಲುವರಾಯಸ್ವಾಮಿ

ಸಭೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಹಾಗೂ  ಎಲ್ಲಾ  ತಹಶೀಲ್ದಾರ್‌ಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X