ರಾಮನಗರ | ಧಾರಾಕಾರ ಮಳೆ: ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

Date:

ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಸುತ್ತಮುತ್ತ ಶನಿವಾರ ಸಂಜೆ ಒಂದು ಗಂಟೆಗೂ ಅಧಿಕ ಧಾರಾಕಾರವಾಗಿ ಮಳೆ ಸುರಿದ ಕಾರಣ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ನಗರದ ಬಹುತೇಕ ರಸ್ತೆಗಳು ಕೆರೆಯಂತಾಗಿದ್ದು, ಗುಡುಗು, ಮಿಂಚು, ಗಾಳಿ ಅರ್ಭಟ ಇರಲಿಲ್ಲ. ಆದರೂ ಈ ವರ್ಷದಲ್ಲಿ ಸುರಿದ ದೊಡ್ಡ ಮಳೆ ಇದಾಗಿದೆ.

- Advertisement -

ರೈಲು ನಿಲ್ದಾಣದ ಬಳಿಯ ಚರಂಡಿಗಳ ನೀರು ಉಕ್ಕಿ ರೈಲ್ವೆ ಸ್ಟೇಷನ್ ಒಳಗೆ ನುಗ್ಗಿತು. ಹಳಿಗಳ ಮೇಲೆ ನೀರು ಸಂಗ್ರಹವಾಗಿ ಕೆರೆಯಂತಾಯಿತು. ಇದರಿಂದ ರೈಲುಗಳು ನಿಧಾನವಾಗಿ ಚಲಿಸಿದವು. ಗಾಂಧಿ ಭವನ, ಪಕ್ಕದ ಪೆಟ್ರೋಲ್ ಬಂಕ್, ರೇಷ್ಮೆ ಮಾರುಕಟ್ಟೆ, ತಾಲೂಕು ಪಂಚಾಯಿತಿ ಹಾಗೂ ತಾಲೂಕು ಕಚೇರಿ ಆವರಣಕ್ಕೂ ನೀರು ನುಗ್ಗಿತ್ತು. ಅಂಗಡಿ, ಮುಂಗಟ್ಟುಗಳಿಗೆ ನೀರು ನುಗ್ಗಿ, ಅಂಗಡಿಯಲ್ಲಿದ್ದ ವಸ್ತುಗಳು ನೀರಿನಲ್ಲಿ ತೇಲಾಡಿದವು. ಅಂಗಡಿಯಲ್ಲಿದ್ದ ನೀರನ್ನು ಹೊರ ಹಾಕಲು ವ್ಯಾಪಾರಸ್ಥರು ಹೈರಾಣಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹೆದ್ದಾರಿ ಮತ್ತು ರಸ್ತೆಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಬೈಕ್, ಕಾರು, ಬಸ್ ಹಾಗೂ ಇತರ ವಾಹನಗಳು ಮುಂದೆ ಚಲಿಸಲು ಸಾಧ್ಯವಾಗದೆ ರಸ್ತೆ ಮಧ್ಯೆದಲ್ಲಿಯೇ ಸಾಲುಗಟ್ಟಿ ನಿಂತಿದ್ದವು. ಬೈಕ್, ಕಾರುಗಳು ನೀರಿನಲ್ಲಿ ಮುಳುಗಿದ್ದವು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಚನ್ನಪಟ್ಟಣ ನಗರದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳ ವಾರ್ಡ್‌ಗಳಿಗೂ ನೀರು ನುಗ್ಗಿ ರೋಗಿಗಳು ಪರದಾಡುವಂತಾಯಿತು. ಶೆಟ್ಟಿಹಳ್ಳಿ ಕೆರೆ ಸ್ವಚ್ಛತೆ ಕಾರ್ಯ ನಡೆಯುತ್ತಿದ್ದು, ಕೆರೆಯಲ್ಲಿ ಸಂಗ್ರಹವಾಗಿದ್ದ ಕೊಳಚೆನೀರು ಹೊರ ಬಿಡಲು ಕೆರೆಯ ಏರಿ ಒಡೆಯಲಾಗಿತ್ತು. ಕೆರೆಗೆ ಹರಿದು ಬಂದ ಮಳೆ ನೀರು ಒಡೆದಿರುವ ಏರಿಯ ಮೂಲಕ ಮತ್ತೆ ಹೊರಗೆ ಹರಿಯಿತು. ಇದರಿಂದ ನಗರದ ರಾಜಾ ಕೆಂಪೇಗೌಡ ಬಡಾವಣೆಯ ಕೆಲವು ಮನೆಗಳು ನೀರಿನಿಂದ ಆವೃತವಾದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...