ರಾಮನಗರ | ನಿಲ್ಲದ ಮಾನವ-ಪ್ರಾಣಿ ಸಂಘರ್ಷ: ಕಾಡಾನೆ ದಾಳಿಗೆ ರೈತ ಬಲಿ

Date:

ರಾಮನಗರ ಜಿಲ್ಲೆಯಲ್ಲಿ ಮಾನವ ಮತ್ತು ಕಾಡಾನೆ ನಡುವಣ ಸಂಘರ್ಷ ಮುಂದುವರೆದಿದ್ದು, ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

- Advertisement -

ಮೃತ ರೈತ ಪುಟ್ಟಮಾದೇಗೌಡ ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿರುವ ತಮ್ಮ ಜಮೀನಿಗೆ ನೀರು ಹರಿಸುವುದಕ್ಕಾಗಿ ಪುಟ್ಟಮಾದೇಗೌಡ ಅವರು, ಬೆಳಿಗ್ಗೆಯೇ ಹೊಲಕ್ಕೆ ಹೋಗಿದ್ದರು. ನೀರು ಹಾಯಿಸುತ್ತಿರುವಾಗ ಏಕಾಏಕಿ ಕಾಡಾನೆ ದಾಳಿ ನಡೆಸಿ, ತುಳಿದು ಹಾಕಿದೆ. ದಾಳಿಯ ತೀವ್ರತೆಗೆ ಪುಟ್ಟಮಾದೇಗೌಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಮೀನಿಗೆ ಹೋದ ಪುಟ್ಟಮಾದೇಗೌಡ ಅವರು ಎಷ್ಟೊತ್ತಾದರೂ ಮನೆಗೆ ಬಾರದಿದ್ದರಿಂದ ಹಾಗೂ ಮೊಬೈಲ್ ಫೋನ್ ಕರೆಯನ್ನೂ ಸ್ವೀಕರಿಸದಿದ್ದರಿಂದ, ಕುಟುಂಬದವರು ಜಮೀನಿಗೆ ಹುಡುಕಿಕೊಂಡು ಹೋಗಿದ್ದಾರೆ. ಆಗ, ಜಮೀನಿನಲ್ಲಿ ಪುಟ್ಟಮಾದೇಗೌಡ ಅವರ ಶವವು ಅರೆನಗ್ನಾವಸ್ಥೆಯಲ್ಲಿ ಬಿದ್ದಿರುವುದು ಕಂಡುಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಬಂಧಿಕರು ಹಾಗೂ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದರು. ಘಟನೆ ಖಂಡಿಸಿ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು. ಸ್ಥಳಕ್ಕೆ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಿದರು. ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ, ಕುಟುಂಬದವರಿಗೆ ಸಮಾಧಾನಪಡಿಸಿ, ಶವವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂ.ಗ್ರಾ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ: ನೋಂದಣಿ ಕೇಂದ್ರಗಳು ಎಲ್ಲಿವೆ?

ರಾಜ್ಯದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಇಂತಹ ಘಟನೆಗಳು ವರದಿಯಾಗುತ್ತಿವೆ. ಇತ್ತೀಚೆಗೆ ಬಸವನ ಬೆಟ್ಟ ಅರಣ್ಯ ಪ್ರದೇಶದಿಂದ ಆಗಮಿಸಿದ ಕಾಡಾನೆಗಳ ಹಿಂಡು ಮಂಡ್ಯ ಜಿಲ್ಲೆಯ ಹಲಗೂರು ಪಟ್ಟಣದ ರೈತರ ರಾಗಿ, ಅವರೆ, ತೆಂಗು ಮತ್ತು ಭತ್ತದ ಫಸಲನ್ನು ತಿಂದು, ತುಳಿದು ಹಾನಿ ಮಾಡಿರುವ ಘಟನೆ ನಡೆದಿತ್ತು. ಇಂತಹ ವೇಳೆ ಮನುಷ್ಯರು ಎದುರು ಸಿಕ್ಕರೆ ಗಾಬರಿಗೊಳ್ಳುವ ಪ್ರಾಣಿಗಳು ಹಠಾತ್‌ ದಾಳಿ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯತೆ ಹೆಚ್ಚಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...