ರಾಮನಗರ | ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರ: ಸೌಲಭ್ಯ ಪಡೆಯುವ ಅರಿವಿನ ಜಾಗೃತಿ

Date:

ಹಲವಾರು ಕಾರ್ಮಿಕರು ಹದಿನೈದು, ಇಪ್ಪತ್ತು ವರ್ಷಗಳಿಂದ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಕಾರ್ಮಿಕರ ಕಾರ್ಡ್‌ ಮಾಡಿಸಿಲ್ಲ. ಅಲ್ಲದೆ ಯಾವುದೇ ರೀತಿಯ ಸೌಲಭ್ಯವನ್ನೂ ಪಡೆದುಕೊಂಡಿಲ್ಲ. ಸೌಲಭ್ಯಗಳ ಕುರಿತು ಮಾಹಿತಿ ಇಲ್ಲದೇ ಇರುವುದೇ ಇದಕ್ಕೆ ಕಾರಣ ಎಂದು ಕಟ್ಟಡ ಕಾರ್ಮಿಕರ ಸಂಘದ ಸಹ ಕಾರ್ಯದರ್ಶಿ ಶಿವಕುಮಾರ್‌ ತಿಳಿಸಿದರು.

- Advertisement -

ರಾಮನಗರದ ಸ್ಪೂರ್ತಿನಗರದಲ್ಲಿರುವ ಸ್ಪಂದನ ಸಂಸ್ಥೆಯಲ್ಲಿ ಭಾನುವಾರ ನಡೆದ ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರದಲ್ಲಿ ಮಾತನಾಡಿ, ಕಾರ್ಮಿಕರಿಗೆ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ರಾಮನಗರದ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಕಾರ್ಮಿಕರ ಕಾರ್ಡ್‌ ಮಾಡಿಸಬೇಕೆಂದಿದ್ದರೂ ಕೂಡ ಅವರಿಗೆ ಉಚಿತವಾಗಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂಬುದು ಸ್ಪಂದನ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಈ ಕಾರಣದಿಂದಾಗಿ ಕಟ್ಟಡ ಕಾರ್ಮಿಕರಿಗೆ ಅರಿವು ಮೂಡಿಸುವ ಸಲುವಾಗಿ ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರವನ್ನು ಏರ್ಪಡಿಸಲಾಗಿದ್ದು, ಸರ್ಕಾರದಿಂದ ಕಾರ್ಮಿಕರಿಗೆ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾದ ವಿಧಾನ, ಬೇಕಾಗಿರುವ ದಾಖಲೆಗಳ ಕುರಿತು ಕಾರ್ಮಿಕರು ತಿಳಿದುಕೊಳ್ಳಬೇಕು” ಎಂದರು.

ಕಟ್ಟಡ ಕಾರ್ಮಿಕರ ಹಕ್ಕು

“ಕಾರ್ಮಿಕರಿಗೆ ಹಲವಾರು ಯೋಜನೆಗಳು ಇದ್ದು, ಇದನ್ನು ಕಾರ್ಮಿಕರಿಗಿಂತ ಹೆಚ್ಚಾಗಿ ಇತರರು ಬಳಸುತ್ತಿದ್ದಾರೆ. ಆದ್ದರಿಂದ ಕಾರ್ಮಿಕರು ಒಟ್ಟುಗೂಡಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಬೇಕು ಹಾಗೂ ತಮಗಿರುವ ಹಕ್ಕುಗಳ ಕುರಿತು ಅರಿತುಕೊಳ್ಳಬೇಕು. ಜತೆಗೆ ಕಟ್ಟಡ ನಿರ್ಮಾಣ ಕಾರ್ಮಿಕರಲ್ಲಿ ʼಸಮಾನ ಕೆಲಸಕ್ಕೆ ಸಮಾನ ವೇತನʼ ಎಂಬ ಕಲ್ಪನೆಯೇ ಇಲ್ಲ, ಮಹಿಳೆ ಮತ್ತು ಪುರುಷರಿಗೆ ಸಮಾನ ವೇತನ ದೊರೆಯುವಂತಾಗಬೇಕು. ಇದಕ್ಕಾಗಿ ನಾವೆಲ್ಲರೂ ಜೊತೆಯಾಗಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅರಸೀಕೆರೆ | ದೇಶದಲ್ಲೇ ರಾಜ್ಯದ ತಲಾ ಆದಾಯ ಹೆಚ್ಚಳಕ್ಕೆ ಪಂಚ ಗ್ಯಾರೆಂಟಿಗಳೇ ಕಾರಣ: ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಸ್ಪಂದನ ಸಂಸ್ಥೆಯ ಮಾಲಿನಿ ಅಂತರ್ಜನಂ, ಸುಪ್ರಿತಾ, ಕಾವ್ಯ, ಯಶೋಧ, ಜಯಶ್ರೀ, ಮಹಾಲಕ್ಷ್ಮಿ, ಮೇಘನಾ, ರಂಗಕರ್ಮಿ ಶ್ರೀನಿವಾಸ್‌ ಹಾಗೂ ರಾಮನಗರದ ವಿವಿಧ ಭಾಗಗಳಿಂದ ಬಂದಿದ್ದ ಐವತ್ತಕ್ಕೂ ಹೆಚ್ಚು ಕಟ್ಟಡ ನಿರ್ಮಾಣ ಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...