ಬಿಡದಿ | ಮೂಕ ಬಾಲಕಿ ಅಪಹರಿಸಿ ಕೊಲೆ, ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಸಂಸ್ಕಾರ

Date:

ರಾಮನಗರ ಜಿಲ್ಲೆ ಬಿಡದಿಯಲ್ಲಿ ಭೀಕರವಾಗಿ ಕೊಲೆಯಾಗಿದ್ದ ಮಾತು ಬಾರದ ಮತ್ತು ಕಿವಿ ಕೇಳದ ಬಾಲಕಿಯ ಅಂತ್ಯ ಸಂಸ್ಕಾರ ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ನಡೆಯಿತು.

- Advertisement -

“ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಹಂತಕರನ್ನು ಪೊಲೀಸರು ಬಂಧಿಸುವವರೆಗೆ ಆಕೆಯ ಶವಸಂಸ್ಕಾರ ಮಾಡುವುದಿಲ್ಲ…” ಎಂದು ಪೋಷಕರು ಹಠ ಹಿಡಿದ್ದರು. ಕೊನೆಗೆ ಅಧಿಕಾರಿಗಳು ಪಾಲಕರ ಮನವೊಲಿಸಿದ್ದು, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸ್ಥಳಕ್ಕೆ ಧಾವಿಸಿದ ಮೇಲೆ ಸ್ಥಳೀಯ ಸ್ಮಶಾನದಲ್ಲಿ ಬಾಲಕಿಯ ಅಂತ್ಯಸಂಸ್ಕಾರ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕಳೆದ ಭಾನುವಾರ 14 ವರ್ಷದ ಈ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಕತ್ತು ನುಲುಚಿ, ಬೆನ್ನು ಮೂಳೆ ಮುರಿದು ಕೊಲೆ ಮಾಡಿ ಬಿಡದಿ ಹೋಬಳಿ ಬಳಿಯ ಭದ್ರಾಪುರ ಹತ್ತಿರದ ರೈಲ್ವೆ ಟ್ರಾಕ್‌ ಬಳಿ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಬಿಡದಿ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಡಿ ಕೆ ಬಿಡದಿ

ಮೂರು ದಿನಗಳ ಹಿಂದೆ ಅರೆ ನಗ್ನಾವಸ್ಥೆಯಲ್ಲಿ ಶವವಾಗಿ ಪತ್ತೆಯಾದ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ್ದಾಳೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರು, ಗ್ರಾಮಕ್ಕೆ ಬುಧವಾರ ಭೇಟಿ ನೀಡಿದಾಗ ಕುಟುಂಬದವರು ಮತ್ತು ಗ್ರಾಮಸ್ಥರು ತಮ್ಮ ನೋವು ತೋಡಿಕೊಂಡರು.

“ಮಗಳ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದರೂ ಪೊಲೀಸರು ನಂಬುತ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದರೆ ಗೊತ್ತಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ನಿನ್ನೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದರೂ, ಇನ್ನೂ ವರದಿ ಸಿಕ್ಕಿಲ್ಲ ಎನ್ನುತ್ತಿದ್ದಾರೆ. ವರದಿ ಬಂದು ಯಾವ ರೀತಿ ಕೊಲೆ ಮಾಡಿದ್ದಾರೆ? ಅತ್ಯಾಚಾರ ಆಗಿದೆಯೇ ಇಲ್ಲವೊ ಎಂದು ಖಚಿತವಾಗಿ ಹೇಳುವವರೆಗೆ ನಾವು ಮಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ” ಎಂದು ಬೆಳಿಗ್ಗೆಯಿಂದ ಪಾಲಕರು ಪಟ್ಟು ಹಿಡಿದಿದ್ದರು.

ಪರಿಹಾರ ವಿತರಣೆ

ಹತ್ಯೆ ಆಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿ ಖುಷಿ ಅವರ ಪೋಷಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಸಾಂತ್ವನ ಹೇಳಿ ಜಿಲ್ಲಾಡಳಿತದ ವತಿಯಿಂದ 4,12,500 ರೂ. ಹಾಗೂ ಪಂಚಾಯಿತಿ ವತಿಯಿಂದ 50 ಸಾವಿರ ಪರಿಹಾರದ ಚೆಕ್ ನೀಡಿದರು.

ಶಾಸಕ ಡಾ. ರಂಗನಾಥ್, ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಎಸ್ಪಿ ಶ್ರೀನಿವಾಸಗೌಡ, ಕಾಂಗ್ರೆಸ್ ಮುಖಂಡ ಗಾಣಕಲ್ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡದಿ ಟೌನ್‌ಶಿಪ್: 7,481ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು; ಜೆಡಿಎಸ್ ದೂರು

ಟೌನ್‌ಶಿಪ್ ನೆಪದಲ್ಲಿ ಬಿಡದಿ ಮತ್ತು ಅದರ ಸುತ್ತಮುತ್ತಲಿನ ಹೋಬಳಿಗಳಲ್ಲಿ ಸುಮಾರು 7,481ರಿಂದ...

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿದುಕೊಳ್ಳದಂತೆ ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

"ಫಲವತ್ತಾದ ಕೃಷಿ ಭೂಮಿಯನ್ನು ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್‌...

ಪಾರ್ಕ್ ಜಾಗ ಒತ್ತುವರಿ: ಬಿಡದಿ ಪುರಸಭೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ರಾಮನಗರದ ಬಿಡದಿ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಭೂಮಿಯ ಬೆಲೆ ಗಗನಕ್ಕೇರುತ್ತಿದ್ದಂತೆ ರಿಯಲ್...

ರಾಮನಗರ | ಕಾರ್ಮಿಕರು ತಂಗಿದ್ದ ಕಟ್ಟಡದಲ್ಲಿ ಸಿಲಿಂಡರ್‌ ಸ್ಫೋಟ: ಪೊಲೀಸ್‌ ಅಧಿಕಾರಿಗಳ ಭೇಟಿ

ರಾಮನಗರದ ಬಿಡದಿಯಲ್ಲಿನ ಕೈಗಾರಿಕಾ ಪ್ರದೇಶದ ಕಾಡುಮನೆ ಕ್ರಾಸ್ ಬಳಿಯ ಭೀಮೇನಹಳ್ಳಿಯಲ್ಲಿ ಸಿಲಿಂಡರ್‌...