ಜಾತಿ ದೌರ್ಜನ್ಯ | ದೇವಸ್ಥಾನದ ಬಳಿ ನೀರು ತುಂಬಲು ಹೋದ ದಲಿತ ಬಾಲಕಿ; ಪೂಜಾರಿಯಿಂದ ನಿಂದನೆ

Date:

ದೇವಸ್ಥಾನದ ಬಳಿಯಿದ್ದ ನಲ್ಲಿಯಲ್ಲಿ ನೀರು ತುಂಬಲು ಹೋಗಿದ್ದ ದಲಿತ ಬಾಲಕಿಗೆ ಆಕೆಯ ಜಾತಿ ಹೆಸರಿಡಿದು ಪೂಜಾರಿ ಮತ್ತು ಆತನ ಸಹೋದರಿ ನಿಂದಿಸಿರುವ ಘಟನೆ ರಾಮನಗರ ಜಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚನ್ನಮಾನಹಳ್ಳಿಯಲ್ಲಿ ಜಾತಿ ದೌರ್ಜನ್ಯದ ಘಟನೆ ನಡೆದಿದೆ. 13 ವರ್ಷದ ಬಾಲಕಿಯನ್ನು ಪೂಜಾರಿ ಜಾತಿ ಹೆಸರಿನಲ್ಲಿ ನಿಂದಿಸಿದ್ದಾನೆ.

ಬಾಲಕಿ ತನ್ನ ಮನೆಯ ಸಮೀಪವೇ ಇದ್ದ ಮಾರಮ್ಮ ದೇವಸ್ಥಾನದ ಬಳಿಯ ನಲ್ಲಿಯಲ್ಲಿ ನೀರು ತುಂಬಿಸಲು ಬಿಂದಿಗೆ ತೆಗೆದುಕೊಂಡು ಹೋಗಿದ್ದಾಳೆ. ಈ ವೇಳೆ, ಪೂಜಾರಿ ಕುಮಾರ್ ಮತ್ತು ಆತನ ಸಹೋದರಿ ಯಶೋಧಾ – ಇಬ್ಬರೂ ಸೇರಿ ಬಾಲಕಿಗೆ ನಿಂದಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅದನ್ನು ಪ್ರಶ್ನಿಸಿದ ಬಾಲಕಿಯ ಚಿಕ್ಕಪ್ಪ ಪ್ರಸನ್ನಕುಮಾರ್ ಮತ್ತು ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪ್ರಸನ್ನ ಕುಮಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಪೂಜಾರಿ ಮತ್ತು ಆತನ ಸಹೋದರಿ ನನ್ನ ಕೆನ್ನೆಗೆ ಹೊಡೆದು, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ” ಎಂದು ಪ್ರಸನ್ನ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅವರ ದೂರನ್ನು ಆಧರಿಸಿ ಐಜೂರು ಪೊಲೀಸರು ಪೂಜಾರಿ ಮತ್ತು ಆತನ ಸಹೋದರಿ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್‌ಸಿ ಮತ್ತು ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ 323, 324, 504, 506 ಹಾಗೂ 34ರ ಅಡಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೆಮ್ಮದಿಯ ಬದುಕು ಬೇಕೋ ಬಿಜೆಪಿಯ ಸುಳ್ಳು ಬೇಕೊ ನೀವೇ ನಿರ್ಧರಿಸಿ: ಅಪ್ಪಾಜಿ ನಾಡಗೌಡ

ಮೋದಿ ಸರ್ಕಾರದ ಸುಳ್ಳು ಭರವಸೆ, ಭಾವನೆ ಕೆರಳಿಸುವ ವಿಚಾರ ಬೇಕೋ ಕಾಂಗ್ರೆಸ್...

ಬೀದರ್ | ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ನಾಮಪತ್ರ ಸಲ್ಲಿಕೆ

ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ, ಬೀದರ್‌ ಜಿಲ್ಲಾ ಉಸ್ತುವಾರಿ...

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು....

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...