ಗಡಿಭಾಗದಲ್ಲಿರುವ ಕನಕಪುರ ತಾಲೂಕಿನ ಸಂಗಮ ದಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ತಮಿಳುನಾಡಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಹೋಗುತ್ತಿದೆ.
ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ ಶನಿವಾರ ಬೆಳಿಗ್ಗೆ 1.65 ಲಕ್ಷ ಕ್ಯುಸೆಕ್ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸಂಗಮ ಮೇಕೆದಾಟು ಬಳಿ ನದಿ ತುಂಬಿ ಹರಿಯುತ್ತಿದೆ.
ಕಬಿನಿ ಜಲಾಶಯದಿಂದ ಶನಿವಾರ ಬೆಳಿಗ್ಗೆ 1.65 ಲಕ್ಷ ಕ್ಯುಸೆಕ್ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸಂಗಮ ಮೇಕೆದಾಟು ಬಳಿ ನದಿ ತುಂಬಿ ಹರಿಯುತ್ತಿದೆ.
ನದಿಯಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಮುಳುಗಡೆ ಭೀತಿ ಇರುವ ಗ್ರಾಮಗಳ ಮೇಲೆ ನಿಗಾ ಇರಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?
ಸದ್ಯಕ್ಕೆ ಕನಕಪುರ ತಾಲೂಕಿನಲ್ಲಿ ನೆರೆ ಭೀತಿ ಎದುರಾಗಿಲ್ಲ. 2 ಲಕ್ಷ ಕ್ಯುಸೆಕ್‌ಗೂ ಹೆಚ್ಚು ನೀರು ನದಿಗೆ ಬಂದರೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಯಿದೆ.
ನದಿ ಅಪಾರ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸಂಗಮ-ಮೇಕೆದಾಟು ಪ್ರವಾಸಿ ತಾಣಕ್ಕೆ ಪ್ರವಾಸಿಗರಿಗೆ ಜಿಲ್ಲಾಡಳಿತ ನಿಷೇಧ ವಿಧಿಸಿದೆ.
ಕೊಡಗು ಜಿಲ್ಲೆಯಲ್ಲಿ ಮಳೆಯ ಬಿರುಸು ಕೊಂಚ ತಗ್ಗಿದ್ದರೂ, ಕೆಆರ್‌ಎಸ್ ಜಲಾಶಯಕ್ಕೆ ಹರಿಯುವ ನೀರಿನ ಪ್ರಮಾಣದಲ್ಲಿ ಅಷ್ಟೇನು ಕಡಿಮೆಯಾಗಿಲ್ಲ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 124.80 ಅಡಿಯಲ್ಲಿ ಪ್ರಸ್ತುತ ಮಟ್ಟ 123.98 ಅಡಿ ಇದೆ. ಒಳಹರಿವು 1,22,021 ಕ್ಯುಸೆಕ್ ಇದ್ದರೆ, ಹೊರ ಹರಿವಿನ ಪ್ರಮಾಣ 1,31,234 ಕ್ಯುಸೆಕ್ ಇದೆ.