ರಾಮನಗರ | ಮುಚ್ಚಿರುವ ಸರ್ಕಾರಿ ಶಾಲೆ ತೆರೆಯಲು ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ

Date:

ಮುಚ್ಚಿರುವ ಸರ್ಕಾರಿ ಶಾಲೆಯನ್ನು ಮತ್ತೆ ತೆರೆಯಬೇಕು. ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಬೇಕು ಎಂದು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೆಬ್ಬಳಲು ಗ್ರಾಮದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಪುಷ್ಪಾ ವಿ,”ನಮ್ಮ ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನ ಪೂರೈಸಿದೆ. ಶಾಲೆ ಆರಂಭವಾದಾಗಿನಿಂದಲೂ ಉತ್ತಮ ಶಿಕ್ಷಣ ನೀಡಿದೆ. ನಾವೆಲ್ಲರೂ ಇದೇ ಶಾಲೆಯಲ್ಲಿ ಓದಿ ಬೆಳೆದಿದ್ದೇವೆ. ಆದರೆ, ಹಿಂದಿನ ಬಿಜೆಪಿ ಸರ್ಕಾರ ಶಾಲೆಯ ವಿದ್ಯಾರ್ಥಿಗಳನ್ನು ಸಮೀಪದ ಕೆಪಿಎಸ್‌ ಶಾಲೆಗೆ ಬಲವಂತವಾಗಿ ಸ್ಥಳಾಂತರಿಸಿ, ಶಾಲೆಯನ್ನು ಮುಚ್ಚಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸ್ಥಳಾಂತರಿದ ಆರಂಭದಲ್ಲಿ ಶಾಲಾ ವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದರು. ಈಗ ಸಣ್ಣ ವಾಹನದಲ್ಲಿ ಕುರಿಗಳಂತೆ ತುಂಬಿಕೊಂಡು ಹೋಗುತ್ತಿದ್ದಾರೆ. ಪೋಷಕರು ಹಿಂದಿನಿಂದಲೂ ಶಾಲೆಯನ್ನು ಮುಚ್ಚುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈಗಲೂ ಶಾಲೆಯನ್ನು ತೆರೆಯಬೇಕೆಂದು ಒತ್ತಾಯಿಸಿ ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪೋಷಕರ ಮಾತನ್ನು ಕೇಳಿಕೊಳ್ಳತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

“ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮುಚ್ಚಿರುವ ನಮ್ಮೂರಿನ ಸರ್ಕಾರಿ ಶಾಲೆಯನ್ನು ಮತ್ತೆ ತೆರೆಯಬೇಕು. ಇಲ್ಲಿಯೇ ಮಕ್ಕಳಿಗೆ ಪಾಠ ಮಾಡಬೇಕು. ಕೂಡಲೇ ಶಾಲೆ ಬೀಗ ತೆಗೆದು ತರಗತಿ ಆರಂಭಿಸಬೇಕು. ಇಲ್ಲದಿದ್ದರೆ, ಬಿಇಒ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ಕವಿತಾ, ಪೋಷಕರಾದ ಅನುಸೂಯ, ಶಶಿಕಲಾ, ರೇಣುಕಾದೇವಿ, ಯಶೋದಮ್ಮ, ಶಿವಮ್ಮ, ಶ್ರೀನಿವಾಸ್, ಚಿಕ್ಕಣ್ಣ, ನಾಗರಾಜು, ಶಿವಕುಮಾರ್ ಎಚ್.ಸಿ, ಸಿದ್ದಪ್ಪ, ನಾಗರಾಜ್, ಶಿವಮ್ಮ, ಬಾನಮ್ಮ ಸೇರಿದಂತೆ ಹಲವಾರು ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....