ಇಂಜಿನಿಯರ್ ದ್ವೇಷ – ಬೆಂಗಳೂರು ಪೊಲೀಸರ ಯಡವಟ್ಟು; ಹಳ್ಳಿ ಮಂದಿಗೆ 5 ಲಕ್ಷ ರೂ. ದಂಡ

Date:

ಗ್ರಾಮಸ್ಥರ ಮೇಲೆ ಎಂಜಿನಿಯರ್‌ ಒಬ್ಬನ ದ್ವೇಷ ಮತ್ತು ಬೆಂಗಳೂರು ಪೊಲೀಸರ ಯಡವಟ್ಟಿನಿಂದಾಗಿ ಗ್ರಾಮವೊಂದರ ಸುಮಾರು 60 ಮಂದಿಗೆ ಸಂಚಾರ ಪೊಲೀಸರು ಸುಮಾರು 5 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ದಂಡದ ಮೊತ್ತ ನೋಡಿ ಬೆರಗಾಗಿರುವ ಗ್ರಾಮದ ಜನರು ನ್ಯಾಯಕ್ಕಾಗಿ ಪೊಲೀಸ್‌ ಕಚೇರಿಯ ಮೆಟ್ಟಿಲೇರಿದ್ದಾರೆ.

- Advertisement -

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆರಳಾಳುಸಂದ್ರ ಗ್ರಾಮದ 60 ಮಂದಿಗೆ ಸಂಚಾರ ನಿಯಮ ಉಲ್ಲಂಘನೆ ಆರೋಪದ ಮೇಲೆ ದಂಡ ವಿಧಿಸಲಾಗಿದೆ. ದಂಡದ ಮಾಹಿತಿ ನೀಡಿ ಬೆರಗಾದ ಗ್ರಾಮಸ್ಥರು ಆ ಕುರಿತು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸರು ತಮಗೆ ದಂಡ ವಿಧಿಸಿರುವುದನ್ನು ಕಂಡು, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೆಲ್ಲಕ್ಕೆ ಕಾರಣ ಬೆಂಗಳೂರಿನಲ್ಲಿ ಎಂಜಿನಿಯರ್‌ ಆಗಿರುವ ತಮ್ಮದೇ ಗ್ರಾಮದ ಲೋಕೇಶ್‌ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

grama

ಎಂಜಿನಿಯರ್ ಲೋಕೇಶ್ ತನ್ನ ಗ್ರಾಮದ ಹಲವಾರು ಮಂದಿಯ ಮೇಲೆ ದ್ವೇಷ, ಅಸೂಯೆ ಹೊಂದಿದ್ದ. ಗ್ರಾಮದಲ್ಲಿದ್ದ ತನ್ನ ಮನೆಯ ಮುಂದೆ ಸಿಸಿ ಕ್ಯಾಮೆರಾ ಅಳವಡಿಸಿಕೊಂಡಿದ್ದ. ತನ್ನ ಮನೆಯ ಮುಂದೆ ವಾಹನಗಳಲ್ಲಿ ಓಡಾಡುವವರ ಚಿತ್ರಗಳನ್ನು ಸೆರೆಹಿಡಿದು, ಸಂಚಾರ ನಿಮಯ ಉಲ್ಲಂಘಿಸಿದ್ದಾರೆಂದು ಬೆಂಗಳೂರು ನಗರ ಪೊಲೀಸರು ಚಾಲ್ತಿಗೆ ತಂದಿರುವ ಬಿಸಿಪಿ ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾನೆ. ಚಿತ್ರಗಳನ್ನು ಕಂಡ ಪೊಲೀಸರು ಘಟನೆಯ ಸ್ಥಳ ಯಾವುದು ಎಂಬುದನ್ನು ಪರಿಶೀಲಿಸದೆ ದಂಡ ವಿಧಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಆತನ ಕೃತ್ಯದಿಂದಾಗಿ ಗ್ರಾಮದ 60 ಮಂದಿ ಬೆಂಗಳೂರಿಗೆ ತಮ್ಮ ವಾಹನಗಳನ್ನು ತರದಿದ್ದರೂ, ಸಂಚಾರ ನಿಯಮ ಉಲ್ಲಂಘನೆಯ ಆರೋಪದಲ್ಲಿ ದಂಡಕ್ಕೆ ತುತ್ತಾಗಿದ್ದಾರೆ. ಲೋಕಶ್‌ ಮಾಡಿರುವ ಕೃತ್ಯದಿಂದ ನಾವು ದಂಡ ಕಟ್ಟುವುದಿಲ್ಲ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಿಸಿದ್ದಾರೆ.

“ಬಿಸಿಪಿ ಆ್ಯಪ್‌ಅನ್ನು ದುರ್ಬಳಕೆ ಮಾಡಿರುವ ಲೋಕೇಶ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ದಂಡವನ್ನು ಮನ್ನಾ ಮಾಡುವ ಕುರಿತು ಬೆಂಗಳೂರು ಪೊಲೀಸರೊಂದಿಗೆ ಚರ್ಚಿಸಲಾಗುವುದು” ಎಂದು ಸಿಪಿಐ ಕೃಷ್ಣ ಲಮಾಣಿ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ...

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...