ಕನಕಪುರ | ಸಾತನೂರು ಸಂತೆ ಜಾಗ ಅತಿಕ್ರಮಣ; ರಸ್ತೆಯಲ್ಲೇ ವ್ಯಾಪಾರ ಮಾಡುವ ದುಸ್ಥಿತಿ

Date:

​ಕನಕಪುರ ತಾಲೂಕಿನ ಸಾತನೂರು ಹೋಬಳಿಯಲ್ಲಿ ಸಂತೆ ಮೈದಾನದ ಜಾಗವನ್ನು ಅತಿಕ್ರಮಣ ಮಾಡಲಾಗಿದ್ದು, ವ್ಯಾಪಾರಿಗಳು ರಸ್ತೆಯಲ್ಲೇ ಕುಳಿತು ವ್ಯಾಪಾರ ಮಾಡುವಂತಾಗಿದೆ ಎಂದು ಕನಕಪುರ ಕೆ.ಆರ್.ಎಸ್ ಪಕ್ಷದ ತಾಲೂಕು ಸಂಚಾಲಕ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

​​ಸಾತನೂರು ಹೋಬಳಿಯ ಸರ್ವೆ ನಂ. 327ರಲ್ಲಿ ಸುಮಾರು 1 ಎಕರೆ 26 ಗುಂಟೆ ಸಂತೆ ಮೈದಾನಕ್ಕೆ ಮೀಸಲಾದ ಜಾಗವಿದೆ. ಈ ಜಾಗವನ್ನು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಖಾಸಗಿ ವ್ಯಕ್ತಿಗಳಿಗೆ ಬಿಟ್ಟುಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
​
ಮೈದಾನದ ಕೊರತೆಯಿಂದಾಗಿ ಕಳೆದ ಹಲವಾರು ವರ್ಷಗಳಿಂದ ವ್ಯಾಪಾರಿಗಳು ರಸ್ತೆಯ ಬದಿಯಲ್ಲೇ ತರಕಾರಿ, ದವಸ ಧಾನ್ಯ ಹಾಗೂ ಜಾನುವಾರುಗಳ ವ್ಯಾಪಾರ ಮಾಡುತ್ತಿದ್ದಾರೆ. ಇದು ವಾಹನ ಸಂಚಾರಕ್ಕೂ ಅಡಚಣೆ ಉಂಟುಮಾಡುತ್ತಿದೆ.
​
ಸಂತೆ ಮೈದಾನದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗುತ್ತಿದ್ದರೂ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ಕನಕಪುರ | ನಿಗದಿತ ಸಮಯಕ್ಕೆ ಬಾಗಿಲು ತೆರೆಯದ ರೇಷ್ಮೆ ಇಲಾಖೆ ಕಚೇರಿ; ಸಾರ್ವಜನಿಕರ ಆಕ್ರೋಶ

​ಈ ಕುರಿತು ಈಗಾಗಲೇ ಗ್ರಾಮ ಪಂಚಾಯತ್‌ಗೆ ಅರ್ಜಿ ಸಲ್ಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಇದರ ವಿರುದ್ಧ ತೀವ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮನಗರ | ಲೋಕ್ ಅದಾಲತ್ ಮೂಲಕ ಗ್ರಾಹಕ ವ್ಯಾಜ್ಯಗಳ ಶೀಘ್ರ ಇತ್ಯರ್ಥಕ್ಕೆ ಕರೆ

ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಬಾಕಿ ಇರುವ ಗ್ರಾಹಕ ವ್ಯಾಜ್ಯಗಳನ್ನು ಪರಸ್ಪರ...

ರಾಮನಗರ, ಕನಕಪುರ, ಬಾಗಲಕೋಟೆ ವೈದ್ಯಕೀಯ ಕಾಲೇಜು ಪ್ರಸ್ತಾವನೆಗೆ ಎನ್‌ಎಂಸಿ ಬ್ರೇಕ್

ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ರಾಜ್ಯದ 3 ವೈದ್ಯಕೀಯ ಕಾಲೇಜುಗಳ ಪ್ರಸ್ತಾವನೆಯನ್ನು...

ರಾಮನಗರದಲ್ಲಿ ‘ಬಾಂಗ್ಲಾ’ ವಲಸಿಗರಿಲ್ಲ: ಕುಮಾರಸ್ವಾಮಿ ಹೇಳಿಕೆ ಸಂಪೂರ್ಣ ಸುಳ್ಳು; ಅಸಲಿಯತ್ತು ಬಿಚ್ಚಿಟ್ಟ ಟಿಪ್ಪು ನಗರದ ನಿವಾಸಿಗಳು

ತಲತಲಾಂತರದಿಂದ ರಾಮನಗರದಲ್ಲಿಯೇ ಹುಟ್ಟಿ ಬೆಳೆದ ತಮ್ಮನ್ನು ಬಾಂಗ್ಲಾದೇಶಿಯರು ಎಂದು ಕರೆದಿರುವುದು ತೀವ್ರ...

ಮಾದಾಪಟ್ಟಣ ದುರಂತ | ವರದಿ ಬಳಿಕ ಮುಂದಿನ ಕ್ರಮ ಎಂದ ಸಿಎಂ

ಕಲ್ಲು ಕ್ವಾರಿ ದುರಂತ ಪ್ರಕರಣದ ಅಧಿಕೃತ ವರದಿ ಬಂದ ನಂತರ ಅಗತ್ಯ...