ಮಾದಾಪಟ್ಟಣ ದುರಂತ | ವರದಿ ಬಳಿಕ ಮುಂದಿನ ಕ್ರಮ ಎಂದ ಸಿಎಂ

Date:

ಕಲ್ಲು ಕ್ವಾರಿ ದುರಂತ ಪ್ರಕರಣದ ಅಧಿಕೃತ ವರದಿ ಬಂದ ನಂತರ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

- Advertisement -

ಗುರುವಾರ ರಾಮನಗರದ ಮಾದಾಪಟ್ಟಣದ ಕಾವೇರಿ ಕ್ರಷರ್ ಕಂಪನಿಗೆ ಸೇರಿದ ಕ್ವಾರಿಯಲ್ಲಿ ನಡೆದ ದುರಂತದಲ್ಲಿ 7 ಮಂದಿ ಬಿಹಾರಿ ಮೂಲದ ಕಾರ್ಮಿಕರು ಮೃತಪಟ್ಟಿದ್ದರು. ಕ್ವಾರಿಯಲ್ಲಿ ಹೊಸ ಕ್ರಷರ್ ನಡೆಸಲು ಹಿಟಾಚಿಯಲ್ಲಿ ಸ್ಥಳ ಸ್ವಚ್ಛಗೊಳಿಸುತ್ತಿದ್ದ ವೇಳೆ ಸುಮಾರು 100 ಅಡಿ ಮೇಲಿನಿಂದ ಕಲ್ಲು ಬಂಡೆಗಳು ಕೆಳಗೆ ಉರುಳಿವೆ. ಹಿಟಾಚಿ ನಿರ್ವಹಿಸುತ್ತಿದ್ದ ಚಾಲಕ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಗಮನಿಸಿರಲಿಲ್ಲ. ಕಲ್ಲುಗಳನ್ನು ಮೇಲಿನಿಂದ ಹಿಟಾಚಿಯಲ್ಲಿ ಕೆಳಕ್ಕೆ ತಳ್ಳಲಾಗಿ ಕೂಲಿ ಕಾರ್ಮಿಕರ ತಲೆಯ ಮೇಲೆ ಬಂಡೆ ಬಿದ್ದು ದುರಂತ ಸಂಭವಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ>ಮಾದಾಪಟ್ಟಣ | ಕಲ್ಲು ಕ್ವಾರಿ ದುರಂತ; ಬಿಹಾರ ಮೂಲದ 7 ಕಾರ್ಮಿಕರ ಸಾವು

ಘಟನೆಯ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ದುರಂತದ ಹಿನ್ನೆಲೆ ಪರಿಶೀಲನೆ ಮಾಡಲು ಪೊಲೀಸ್ ಅಧಿಕಾರಿಗಳು, ಗಣಿ ಹಾಗೂ ಭೂ ವಿಜ್ಞಾನ ಅಧಿಕಾರಿಗಳು ಸ್ಥಳ ಭೇಟಿ ನೀಡಿದ್ದಾರೆ. ಕ್ವಾರಿಯ ಪರವಾನಗಿಯ ಅಧಿಕೃತತೆಯ ಕುರಿತು ಕೂಲಂಕುಷ ಪರಿಶೀಲನೆ ನಡೆಸಲಾಗುವುದು. ಸ್ಫೋಟದಿಂದ ದುರಂತ ಸಂಭವಿಸಿಲ್ಲ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದ್ದು, ಅಧಿಕೃತ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಅವರು, ಕಲ್ಲುಗಣಿ ನಡೆಸುವವರು ನಿಯಮಗಳು ಮತ್ತು ಕಾನೂನುಗಳನ್ನು ಉಲ್ಲಂಘಿಸಿರುವುದು ದೃಢಪಟ್ಟರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಗಣಿ ನಿರ್ವಾಹಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...