ಆನೆಯನ್ನು ಪಳಗಿಸಿ ಕಾಡಿಗೆ ಓಡಿಸುತ್ತೇನೆಂದು ಹೋಗಿದ್ದ ವ್ಯಕ್ತಿಯೊಬ್ಬ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬನ್ನಿಮುಕೋಡ್ಲು ನಿವಾಸಿ ಚಂದ್ರಣ್ಣ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಇತ್ತೀಚೆಗೆ, ತಾಲೂಕಿನ ಗ್ರಾಮಗಳಲ್ಲಿ ಕಾಡಾನೆಗಳು ಕಾಣಿಸಿಕೊಂಡಿದ್ದವು. ಅವುಗಳನ್ನು ಪಳಗಿಸುತ್ತೇನೆಂದು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಚಂದ್ರಣ್ಣ ಹೋಗಿದ್ದರು ಎಂದು ತಿಳಿದು ಬಂದಿದೆ.
ಎರಡು ದಿನಗಳ ಹಿಂದೆಯೇ ಕಾಡಿಗೆ ಹೋಗಿದ್ದ ಚಂದ್ರಣ್ಣ, ಮನೆಗೆ ಮರಳಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದು, ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಆತನ ಮೃತದೇಹ ಪತ್ತೆಯಾಗಿದೆ.