ಬಜೆಟ್‌ 23-24 | ಡಿಕೆ‌ ಶಿವಕುಮಾರ್ ಕ್ಷೇತ್ರ ಕನಕಪುರಕ್ಕೆ ಹೊಸ ವೈದ್ಯಕೀಯ ಕಾಲೇಜು ಘೋಷಣೆ

Date:

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

- Advertisement -

ವೈದ್ಯಕೀಯ ಶಿಕ್ಷಣ ವಿಚಾರವಾಗಿ ಬಜೆಟ್‌ನಲ್ಲಿ ವಿಷಯ ಪ್ರಸ್ತಾಪಿಸಿ, “ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

“ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು” ಎಂದು ಹೇಳಿದರು.

“NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಜೊತೆಯಲ್ಲಿ ನಾನ್‌ ಆಲ್ಕೋಹಾಲಿಕ್‌ ಫ್ಯಾಟಿ ಲಿವರ್‌ ಖಾಯಿಲೆಯ (NAFLD) ರೋಗಿಗಳಲ್ಲಿ ಸಿರೋಸಿಸ್‌ ಮತ್ತು ಕ್ಯಾನ್ಸರ್‌ ಪತ್ತೆ ಹಚ್ಚಲು ಒಂದು FibroScan ಅನ್ನು ಒದಗಿಸಲಾಗುವುದು” ಎಂದರು.

“ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ (Allied Health Sciences) ಕಾಲೇಜುಗಳನ್ನು ಸ್ಥಾಪಿಸಲಾಗುವುದು” ಎಂದು ಭರವಸೆ ನೀಡಿದರು..

“ಮೈಸೂರು ಮತ್ತು ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗಳ (Trauma Care Center) ಕಾರ್ಯಾಚರಣೆಗೆ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು. ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು (Kidwai Memorial Institute of Oncology) ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು” ಎಂದರು.

“ಚಿತ್ರದುರ್ಗದ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಎಲ್ಲಾ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ಬಂಗಾಳದಲ್ಲಿ ಮಿತಿಮೀರಿದ ಕೋಮು ರಾಜಕಾರಣ: ಆಡಳಿತ ಮತ್ತು ಶಿಕ್ಷಣ ಕ್ಷೇತ್ರಕ್ಕೆ ತೀವ್ರ ಸವಾಲು

ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ವಾರಗಳಿಂದ ಆಡಳಿತ, ಶಿಕ್ಷಣ ಸಂಸ್ಥೆಗಳು ಹಾಗೂ...

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು; ಹಿಂದುತ್ವವೇ ಅಸ್ತ್ರ

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ...