ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ!

Date:

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ (42ನೇ ಎಸಿಎಂಎಂ ಕೋರ್ಟ್) ಭಾರಿ ಹಿನ್ನಡೆಯಾಗಿದೆ. ವಿಚಾರಣೆಗೆ ಸತತವಾಗಿ ಗೈರುಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ (NBW) ಜಾರಿಗೊಳಿಸಿದೆ.

- Advertisement -

2018ರ ಚುನಾವಣೆಯ ಸಮಯದಲ್ಲಿ ರಾಮನಗರ ತಾಲೂಕಿನ ಬಸವನಪುರ ಗ್ರಾಮದ ಬಳಿ ಇರುವ ‘ಹೀಲ್ ವ್ಯೂ’ ರೆಸಾರ್ಟ್‌ನಲ್ಲಿ ಹೆಚ್.ಸಿ ಬಾಲಕೃಷ್ಣ ಅವರು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದರು. ಚುನಾವಣಾ ಆಯೋಗದ ಅನುಮತಿ ಪಡೆಯದೇ ಅಕ್ರಮವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಆಯೋಗ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರ್ಯಕ್ರಮದ ಕುರಿತು ಮಾಹಿತಿ ಲಭಿಸಿದ ತಕ್ಷಣ ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಮತ್ತು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ (ಸ್ಥಿರ ಕಣ್ಗಾವಲು ತಂಡ) ಅಧಿಕಾರಿಗಳು ಜಂಟಿಯಾಗಿ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದರು. ನಿಯಮ ಉಲ್ಲಂಘಿಸಿ ಸಭೆ ನಡೆಸಿದ ಮತ್ತು ಮತದಾರರಿಗೆ ಆಮಿಷ ಒಡ್ಡಿದ ಆರೋಪದ ಮೇಲೆ ಬಾಲಕೃಷ್ಣ ಅವರ ವಿರುದ್ಧ ಅಬಕಾರಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಲೇಖನ ಓದಿದ್ದೀರಾ?: ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂ ಮತದಾರರ ಪ್ರಚಾರ, ಪಾಠ ಕಲಿಯುವುದೇ ಹೈಕಮಾಂಡ್?

2018ರಲ್ಲಿ ನ್ಯಾಯಾಲಯವು ವಿಚಾರಣೆಯನ್ನೂ ಆರಂಭಿಸಿತ್ತು. ಆದರೆ, ಪ್ರಕರಣದ ವಿಚಾರಣೆಗೆ ಬಾಲಕೃಷ್ಣ ಅವರು ಹಾಜರಾಗದೆ ಸತತವಾಗಿ ಗೈರಾಗಿದ್ದರು. ನ್ಯಾಯಾಲಯದ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸದ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಧೀಶರು ಬಂಧನ ವಾರೆಂಟ್ ಹೊರಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...