ಬಿಡದಿ ಟೌನ್‌ಶಿಪ್‌ಗೆ ತೀವ್ರ ವಿರೋಧ: ಬ್ಯಾನರ್‌ಗಳಿಗೆ ರಕ್ತ ಹಚ್ಚಿ ರೈತರ ಪ್ರತಿಭಟನೆ

Date:

ಬಿಡದಿ ಟೌನ್‌ಶಿಪ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬೈರಮಂಗಲ ಗ್ರಾಮದಲ್ಲಿ ಟೌನ್‌ಶಿಪ್ ಯೋಜನೆ ವಿರುದ್ಧ ಘೋಷಣೆಗಳಿದ್ದ ಬ್ಯಾನರ್‌ಗಳಿಗೆ ರಕ್ತ ಹಚ್ಚುವ ಮೂಲಕ ರೈತರು ಮತ್ತು ರೈತ ಮಹಿಳೆಯರು ಪ್ರತಿಭಟನೆ ಕೈಗೊಂಡರು.

- Advertisement -

ಭೂ ಸ್ವಾಧೀನ ಯೋಜನೆಯನ್ನು ವಿರೋಧಿಸಿ, “ರಕ್ತ ಕೊಡುವೆವು ಹೊರತು ಭೂಮಿ ಕೊಡುವುದಿಲ್ಲ” ಎಂಬ ಘೋಷಣೆಯೊಂದಿಗೆ ಬೆರಳು ಚುಚ್ಚಿಕೊಂಡು ರಕ್ತದಲ್ಲಿ ಬ್ಯಾನರ್‌ಗಳ ಮೇಲೆ ಬರೆಯುವ ಮೂಲಕ “ಜೀವ ಬಿಟ್ಟರೂ ಭೂಮಿ ಬಿಡುವುದಿಲ್ಲ” ಎಂದು ಸಾಂಕೇತಿಕ ಹೋರಾಟಕ್ಕೆ ಮುಂದಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಲವಂತದ ಭೂಸ್ವಾಧೀನ ಮಾಡುವುದಿಲ್ಲ ಎಂಬ ಹೇಳಿಕೆ ನೀಡುವ ಸರ್ಕಾರ, ಈಗಾಗಲೇ 4,940 ಎಕರೆ ಭೂಮಿ ಸ್ವಾಧೀನಪಡಿಸುವ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದು ಸರ್ಕಾರ ತನ್ನ ಹೇಳಿಕೆಗೆ ಬದ್ಧವಾಗಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಜಂಟಿ ಮಾಪನ ಸಮೀಕ್ಷೆ (JMC Survey) ನಡೆಸುವ ವೇಳೆ ಪ್ರತಿಭಟನಾನಿರತ ರೈತರು ಅಧಿಕಾರಿಗಳಿಗೆ ಸಮೀಕ್ಷೆ ನಡೆಸಲು ಅಡ್ಡಿ ಪಡಿಸಿದರು ಎಂಬ ಕಾರಣಕ್ಕೆ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ತರುವಾಯ ರಾಜ್ಯ ಸರ್ಕಾರ ಜಂಟಿ ಮಾಪನ ಸಮೀಕ್ಷೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಸರ್ಕಾರ ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುತ್ತದೆ. ಒತ್ತಡಕ್ಕೆ ಮಣಿದು ಭೂಮಿ ಬಿಟ್ಟುಕೊಡುವ ನಿರ್ಧಾರವನ್ನು, ರೈತರಿಂದ ನಿರೀಕ್ಷಿಸದಿರಲಿ ಎಂದು ರೈತರು ಸರ್ಕಾರವನ್ನು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...