ಮಂಡ್ಯ | ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಂಡು ಹುಚ್ಚನಂತಾಡುತ್ತಿದ್ದಾರೆ: ಶಾಸಕ ರವಿ ಗಣಿಗ

Date:

ರಾಜಕೀಯವಾಗಿ ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಯತ್ನಿಸುತ್ತಿದ್ದಾರೆ. ಅದಕ್ಕಾಗಿ ರಮೇಶ್​ ಜಾರಕಿಹೊಳಿ ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು. ಕಾಲು ಹಿಡಿಯಲು ಬಂದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಂಡು ಹುಚ್ಚನಂತಾಡುತ್ತಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಶಾಸಕ ರವಿ ಗಣಿಗ ವಾಗ್ದಾಳಿ ನಡೆಸಿದ್ದಾರೆ.

- Advertisement -

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್​​ ಪಕ್ಷದ ಒಕ್ಕಲಿಗರ ನಾಯಕತ್ವ ಮುಗಿಸಲು ಹೊರಟಿದ್ದಾರೆ. ನೂರು ಜನ ರಮೇಶ್ ಜಾರಕಿಹೊಳಿ ಬಂದರೂ ಡಿ.ಕೆ. ಶಿವಕುಮಾರ್​ ಅವರನ್ನು ಟಚ್ ಮಾಡಲು ಆಗಲ್ಲ. ಏಳು ಜನ್ಮ ಎತ್ತಿದರೂ ಡಿ.ಕೆ.ಶಿವಕುಮಾರ್​ರನ್ನು ಮತ್ತೆ ಜೈಲಿಗೆ ಕಳಿಸಲು ಆಗಲ್ಲ ಎಂದು ಕೆಂಡವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಿ.ಕೆ. ಶಿವಕುಮಾರ್​ ಸಿಡಿ ಮಾಸ್ಟರ್​ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿ  ಮಾತನಾಡಿದ ಅವರು, ಬೆಡ್ ಮೇಲೆ ನಾವು ಮಲಗಲು ಹೋಗಿದ್ವಾ? ಸಿಡಿ ಮಾಡಿದವನು ಯಾರೋ, ತೋರಿಸಿರೋನು ಯಾರೋ, ಹೀಗೆ ಮಾತನಾಡಿ ಮಾತನಾಡಿಯೇ ಅವರು ಮಾಜಿ ಆಗಿರುವುದು, ನಾವು ಅಧಿಕಾರಕ್ಕೆ ಬಂದಿರುವುದು.

ರಾಜ್ಯದಲ್ಲಿ ಬರ ಇದೆ, ಜನರ ಬಳಿಗೆ ಹೋಗಬೇಕು. ಅದನ್ನು ಬಿಟ್ಟು ಡಿಸಿಎಂ ಅವರನ್ನು ಜೈಲಿಗೆ ಕಳುಹಿಸುತ್ತೇನೆ, ಅವರನ್ನ ಮಾಜಿ ಮಾಡುತ್ತೇನೆ ಅನ್ನುವುದನ್ನು ಬಿಡಬೇಕು. ಹುಚ್ಚರಂತೆ ಮಾತನಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಶಾಸಕರಲ್ಲಿ ಯಾವುದೇ ಅಸಮಾಧಾನವಿಲ್ಲ. 137ಜನ ಶಾಸಕರು ಎಲ್ಲರ ಜೊತೆ ಇದ್ದೇವೆ. ನಾವೆಲ್ಲ ಸಂತೋಷವಾಗಿದ್ದೇವೆ. ವಿರೋಧ ಪಕ್ಷದವರಿಗೆ ಅಧಿಕಾರವಿಲ್ಲ, ಇದನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಪ್ರತಿದಿನ ಒಂದೊಂದು ಏನೇನೊ ಹೇಳುತ್ತಿದ್ದಾರೆ ಎಂದರು.

ಡಿ.ಕೆ. ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ಹೆಸರು ಕೆಡಿಸುತ್ತಿದೆ. ಡಿಕೆ ಆ್ಯಂಡ್ ಕಂಪನಿ ಆಪರೇಷನ್ ಕಮಲ ಮಾಡುತ್ತಿದ್ದಾರೆ ಅಂತಿದ್ದಾರೆ. ರಾಜ್ಯದಲ್ಲಿ ಆಪರೇಷನ್ ಕಮಲ ಆಗಲು ಸಾಧ್ಯವಿಲ್ಲ. ನಂಬರ್ ಹೆಚ್ಚು ಬೇಕು, ಮಹಾರಾಷ್ಟ್ರ ಮಾದರಿಯಲ್ಲಿದರೆ ಸರ್ಕಾರ ಬದಲಾಗುವುದು. ಅತೀ ಶೀಘ್ರದಲ್ಲಿ ಡಿ.ಕೆ. ಶಿವಕುಮಾರ್ ಮಾಜಿ ಮಂತ್ರಿ ಆಗಲಿದ್ದಾರೆ. ಹೈಕೋರ್ಟ್ ಹಿನ್ನಡೆಯಿಂದ ಅವರು ಮಾಜಿ ಅಗಲಿದ್ದಾರೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...