ಉಡುಪಿ | ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನಿಂದ ವಂಚನೆ, ನಿಷ್ಪಕ್ಷಪಾತ ತನಿಖೆ ನಡೆಯಲಿ – ರಮೇಶ್ ಕಾಂಚನ್

Date:

Advertisements

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಆರೋಪದ ಕುರಿತು ‘ಕಲಂ 64’ರ ಅಡಿಯಲ್ಲಿ ವಿಚಾರಣೆಗೆ ಕರ್ನಾಟಕ ರಾಜ್ಯ ಸಹಕಾರಿ ಸಂಘಗಳ ನಿಬಂಧಕರು ಆದೇಶ ನೀಡಿರುವುದು ಸ್ವಾಗತಾರ್ಹ ಸಂಗತಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಹೇಳಿದ್ದಾರೆ.

ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ‘ಕಲಂ 64’ರಡಿಯಲ್ಲಿ ವಿಚಾರಣೆ ನಡೆಸುವಂತೆ ಸಂತ್ರಸ್ತರ ಪರವಾಗಿ ನ್ಯಾಯಕ್ಕಾಗಿ ಶ್ರಮಿಸುತ್ತಿರುವ ಹೋರಾಟ ಸಮಿತಿಯವರು ಬೆಂಗಳೂರಿನಲ್ಲಿ ಸಹಕಾರಿ ಸಚಿವರನ್ನು ಹಾಗೂ ಸಹಕಾರಿ ಸಂಘಗಳ ನಿಬಂಧಕರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಗ್ರ ತನಿಖೆಗೆ ಒತ್ತಾಯಿಸಿದ ನಿಟ್ಟಿನಲ್ಲಿ ಇದೀಗ ಸರಕಾರ, ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ 1959ರ ಪ್ರಕಾರ ಉಡುಪಿ ಜಿಲ್ಲೆಯ ಸಹಕಾರಿ ಸಂಘಗಳ ಉಪನಿಬಂಧಕರನ್ನು ವಿಚಾರಣೆಗಾಗಿ ನೇಮಿಸಿ ಆದೇಶ ಹೊರಡಿಸಲಾಗಿದ್ದು ನಿಷ್ಪಕ್ಷಪಾತವಾದ ತನಿಖೆ ನಡೆದು ಈ ಮೂಲಕ ಸತ್ಯ ಹೊರಬರಬೇಕಾಗಿದೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇನಾಮಿ ಹೆಸರಿನಲ್ಲಿ ನೀಡಿರುವ ಸಾಲವನ್ನು ಸ್ವಂತಕ್ಕೆ ಬಳಸಲಾಗಿದೆ ಎನ್ನುವ ಆರೋಪಕ್ಕೆ ಬ್ಯಾಂಕಿನ ಆಡಳಿತ ಮಂಡಳಿ ಯಾವುದೇ ರೀತಿಯ ಸ್ಪಷ್ಟ ಉತ್ತರ ನೀಡದೆ ಕೇವಲ ಹಾರಿಕೆ ಉತ್ತರ ನೀಡಿಕೊಂಡು ಬಂದಿದ್ದು ಇದೀಗ ‘ಕಲಂ 64’ರ ಅಡಿಯಲ್ಲಿ ವಿಚಾರಣೆಗೆ ಅವಕಾಶ ನೀಡಿದ್ದು ಗ್ರಾಹಕರು ಮತ್ತು ಸಂತ್ರಸ್ತರು ನೀಡಿರುವ ದೂರಿನ ಮೇಲೆ ವಿವರವಾದ ತನಿಖೆ ನಡೆಯಬೇಕಾಗಿದೆ. ಗ್ರಾಹಕರ ಸಹಿಗಳನ್ನು ನಕಲಿ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ವಿಧಿ ವಿಜ್ಞಾನ ತಂಡದಿಂದ ತನಿಖೆ ನಡೆಸಬೇಕು ಇಲ್ಲವಾದರೆ ಇದಕ್ಕೆ ಸೂಕ್ತ ನ್ಯಾಯ ಸಿಗಲು ಸಾಧ್ಯವಿಲ್ಲ.

Advertisements

ಉಡುಪಿ ಜಿಲ್ಲೆಯ ಸಹಕಾರಿ ಸಂಘಗಳ ಉಪನಿಬಂಧಕರು ವಿಚಾರಣೆ ನಡೆಸುವಾಗ ಬ್ಯಾಂಕಿನ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಿತ ಸಿಬ್ಬಂದಿಗಳನ್ನು ಸಹ ವಿಚಾರಣೆಗೊಳಪಡಿಸಬೇಕು. ವಿಚಾರಣೆಯ ಸಂದರ್ಭದಲ್ಲಿ ಬ್ಯಾಂಕಿನಿಂದ ಆಗಿರುವ ಬೇರೆ ಬೇರೆ ರೀತಿಯ ಲೋಪದೋಷಗಳ ಕುರಿತು ಕೂಲಂಕುಷವಾದ ತನಿಖೆ ನಡೆಸಬೇಕು. ವಿಚಾರಣೆಯ ವರದಿಯನ್ನು ನಿಗದಿತ ಅವಧಿಯ ಒಳಗಾಗಿ ಸಮಾಜದ ಮುಂದೆ ಬಹಿರಂಗಪಡಿಸಬೇಕು. ಹೀಗಾಗಿ ಈ ತನಿಖೆಯ ವಿಚಾರಣಾಧಿಕಾರಿಯವರು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಿ ತೊಂದರೆಗೊಳಗಾದ ನೂರಾರು ಸಂತ್ರಸ್ತರ ಸಮಸ್ಯೆಗೆ ಪರಿಹಾರ ಒದಗಿಸಬೇಕು.ಹಾಗೆಯೇ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ಸಮಗ್ರ ತನಿಖೆಗೆ ಮುಂದಾಗಬೇಕೆಂದು‌ ಸಂತ್ರಸ್ತರ, ಬ್ಯಾಂಕಿನ ಗ್ರಾಹಕರ ಪರವಾಗಿ ಅಗ್ರಹಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X