ಉಡುಪಿಯಲ್ಲಿ ಸಮಾನ ಮನಸ್ಕರ ಸಂಘಟನೆ ಹಾಗೂ ಉಡುಪಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಗಾಂಧಿ ಭಾರತ, ಜೈ ಬಾಪು ,ಜೈ ಭೀಮ್ ಜೈ ಸಂವಿಧಾನ ಬೃಹತ್ ಸಮಾವೇಶವು ನಗರದ ಕ್ರಿಸ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಸಮಾವೇಶಕ್ಕೂ ಮುನ್ನ ಸಾವಿರಾರು ಕಾರ್ಯಕರ್ತರು ಬೃಹತ್ ಮೆರವಣಿಗೆವ ಮೂಲಕ ಸಾಗಿಬಂದರು.
ಸಮಾವೇಶವನ್ನು ಮಾಜಿಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ ವಿಧಾನ ಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ರನ್ನು ಕೇವಲ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸುವುದು ತಪ್ಪು. ಅವರೊಬ್ಬ ಮಹಾನ್ ಮಾನವತಾವಾದಿ ಎಂಬುದಾಗಿ ನಾವೆಲ್ಲ ಸ್ವೀಕರಿಸಬೇಕು.

ಈಗ ದೇಶಕ್ಕೆ ನೆಗಡಿ ಹಿಡಿದಿದೆ. ಅದಕ್ಕಾಗಿ ಮೂಗು ಸುಧಾರಿಸುವವರೆಗೆ ಶುದ್ಧವಾಗಿ ಇಟ್ಟುಕೊಳ್ಳಬೇಕು. ನೆಗಡಿಯಾಗಿದೆ ಎಂದು ಮೂಗನ್ನೇ ಕಿತ್ತು ಹಾಕಲು ಹೋಗಬಾರದು. ಮೀಸಲಾತಿಯೇ ಇಲ್ಲದ ಕಾಲದಲ್ಲಿ ಸಂವಿಧಾನ ರಚಿಸಲು ಅಂಬೇಡ್ಕರ್‌ರನ್ನು ಆಯ್ಕೆ ಮಾಡಲಾಯಿತು. ಯಾಕೆಂದರೆ ಅವರು ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಕಾನೂನು ಶಾಸ್ತ್ರದಲ್ಲಿ ಪಾಂಡಿತ್ಯ ಹೊಂದಿದ್ದರು. ಸಂವಿಧಾನದಿಂದಾಗಿ ಈ ದೇಶದಲ್ಲಿ ಹೋರಾಟ ಮಾಡದವರಿಗೂ ಸ್ವಾತಂತ್ರ್ಯ ದೊರೆತಿದೆ ಎಂದರು.
ಅಂಬೇಡ್ಕರ್ ಸಂವಿಧಾನ ರಚಿಸುವ ಮುನ್ನ ಈ ದೇಶವು ಮನಸ್ಮೃತಿ ಆಧಾರದಲ್ಲಿ ನಡೆಯುತ್ತಿತ್ತು. ಈ ದೇಶವನ್ನು ಸಂವಿಧಾನದ ಮೂಲಕ ಸುಧಾರಿಸಲು ಸಾಧ್ಯವಿಲ್ಲ ಎಂದು ಗೋಲ್ ವಾಲ್ಕರ್ ಬರೆದಿದ್ದರು. ಅದಕ್ಕೆ ಅವರು ಸಂವಿಧಾನ ಬದಲಾಯಿಸಬೇಕು ಎಂದು ಹೇಳಿದ್ದರು. ಅಂಬೇಡ್ಕರ್ ಅವರ ಬಾಲ್ಯ, ಅಂಬೇಡ್ಕರ್ ತಂದೆ ತಾಯಿಗೆ ಆದ ಅನುಭವ ಅವರಿಗೆ ಆಗಿರಲಿಲ್ಲ. ಜಾತಿಯ ಕಾರಣಕ್ಕೆ ನೋವು ಅನುಭವಿಸಿದ ಅಂಬೇಡ್ಕರ್ ಸಂವಿಧಾನ ರಚಿಸುತ್ತಾರೆ ಎಂದು ಅವರು ತಿಳಿಸಿದರು.

ಸಂವಿಧಾನ ಕರಡು ಸಮಿತಿಯ ಸಂಪೂರ್ಣ ಕೆಲಸವನ್ನು ಅಂಬೇಡ್ಕರ್ ಒಬ್ಬರೇ ಮಾಡಿದ್ದರು. ಅಂಬೇಡ್ಕರ್ ಹಿಂದುವಾಗಿ ಹುಟ್ಟಿದರು ಆದರೆ ಹಿಂದುವಾಗಿ ಸಾಯಲು ಬಯಸಿರಲಿಲ್ಲ. ಪರಿಶಿಷ್ಟ ಜಾತಿಯ ತಮ್ಮ ಸಮುದಾಯದವರಿಗೆ ಪ್ರತ್ಯೇಕ ಮತದಾನದ ಹಕ್ಕು ಅಂಬೇಡ್ಕರ್ ಕೇಳಿದ್ದರು. ಆದರೆ ಗಾಂಧೀಜಿ ಇದಕ್ಕೆ ವಿರೋಧ ಸೂಚಿಸಿದ್ದರು. ದೇಶದ ಸ್ವಾತಂತ್ರ್ಯದ ಜೊತೆ ತನ್ನ ಜನರ ಸುಧಾರಣೆ ಅಂಬೇಡ್ಕರ್‌ಗೆ ಆದ್ಯತೆಯಾಗಿತ್ತು. ಅಂಬೇಡ್ಕರ್ ಸಂವಿಧಾನ ರಚಿಸುವ ಮುನ್ನ ಈ ದೇಶವು ಮನಸ್ಮೃತಿ ಆಧಾರದಲ್ಲಿ ನಡೆಯುತ್ತಿತ್ತು. ಈ ದೇಶವನ್ನು ಸಂವಿಧಾನದ ಮೂಲಕ ಸುಧಾರಿಸಲು ಸಾಧ್ಯವಿಲ್ಲ ಎಂದು ಗೋಲ್ ವಾಲ್ಕರ್ ಬರೆದಿದ್ದರು. ಅದಕ್ಕೆ ಅವರು ಸಂವಿಧಾನ ಬದಲಾಯಿಸಬೇಕು ಎಂದು ಹೇಳಿದ್ದರು. ಅಂಬೇಡ್ಕರ್ ಅವರ ಬಾಲ್ಯ, ಅಂಬೇಡ್ಕರ್ ತಂದೆ ತಾಯಿಗೆ ಆದ ಅನುಭವ ಅವರಿಗೆ ಆಗಿರಲಿಲ್ಲ. ಜಾತಿಯ ಕಾರಣಕ್ಕೆ ನೋವು ಅನುಭವಿಸಿದ ಅಂಬೇಡ್ಕರ್ ಸಂವಿಧಾನ ರಚಿಸುತ್ತಾರೆ ಎಂದು ಅವರು ತಿಳಿಸಿದರು.

ಇನ್ನು ಕಾಂಗ್ರೆಸ್ ಮಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ ದೇಶದ ಕಟ್ಟಕಡೆಯ ವ್ಯಕ್ತಿಗೂ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನ ಬದುಕುವ ಹಕ್ಕು ನೀಡಿದೆ. ದುರಾದೃಷ್ಕರ ವಿಚಾರ ಏನೇಂದ್ರೆ ಇವತ್ತು ದೇಶದಲ್ಲಿ ಬಡವ ಬಡವನಾಗಿಯೇ ಉಳಿದಿದ್ದಾನೆ. ಶ್ರೀಮಂತ ಶ್ರೀಮಂತರಾಗಿ ಬೇಳೆಯುತ್ತಿದ್ದಾರೆ. ಇವತ್ತು ಸಂವಿಧಾನದ ಅರಿವು ಎಲ್ಲರಲ್ಲೂ ಮೂಡಬೇಕಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬಡವರು ಹಿಂದುಳಿದವರು ಬದುಕಲು ಕಷ್ಟವಾಗಬಹುದು, ಹೀಗಾಗಿ ಗಾಂಧಿ ಭಾರತ ಸಂವಿಧಾನ ಅರಿವು ಸಮಾವೇಶವನ್ನು ನಾವು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

ಸಮಾವೇಶದಲ್ಲಿ ಮಾಜಿ ಶಾಸಕ ಗೋಪಲ ಪೂಜಾರಿ ,ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಲಾವಣ್ಯ ಬಲ್ಲಾಳ್ ದಿನೇಶ್ ಶೆಟ್ಟಿ ಮೊಳ ಹಳ್ಳಿ, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನ ನಾಯಕರುಗಳು ಉಪಸ್ಥಿತರಿದ್ದರು.