ಯಥೇಚ್ಛವಾಗಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆಯಲ್ಲಿ ಪಲ್ಟಿಯಾಗಿದ್ದು, ಹೊತ್ತಿ ಉರಿದಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ದೊಡ್ಡಗಂಗವಾಡಿ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆ ಮೂವರನ್ನೂ ರಾಮನಗರ ಗ್ರಾಮಾಂತರ ರಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ರೋಹಿತ್, ತರುಣ್ ಹಾಗೂ ಮಂಜು ಕಾರಿನಲ್ಲಿದ್ದ ಯುವಕರು. ದೊಡ್ಡಗಂಗವಾಡಿ ಗ್ರಾಮದೊಳಗೆ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿಕೊಂಡು ಬಂದಿದ್ದಾರೆ. ಈ ವೇಳೆ, ವ್ಯಕ್ತಿಯೊಬ್ಬರಿಗೆ ಗುದ್ದಿದ್ದಾರೆ ಎಂದು ಆರೋಪಿಸಲಾಗಿದೆ.
ವ್ಯಕ್ತಿಗೆ ಗುದ್ದಿ ತಪ್ಪಿಸಿಕೊಳ್ಳುವ ವೇಳೆ, ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಯುವಕರನ್ನು ಹಿಡಿದ ಗ್ರಾಮಸ್ಥರು ಥಳಿಸಿದ್ದಾರೆ ಎಂದು ವರದಿಯಾಗಿದೆ.