ರಾಮನಗರ | ಕಾಡಾನೆ ದಾಳಿಗೆ ತೋಟದ ಕಾವಲುಗಾರ ಬಲಿ

Date:

ಮಾವಿನ ತೋಟದ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೋಟವನ್ನು ಕಾವಲು ಕಾಯುತ್ತಿದ್ದ ಕಾವಲುಗಾರರನ್ನು ಕೊಂದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಮೃತನನ್ನು ಕನಕಪುರದ ವೀರಭದ್ರ (40) ಎಂದು ಗುರುತಿಸಲಾಗಿದೆ. ವಿರೋಪಸಂದ್ರದ ಲೋಕೇಶ್‌ ಎಂಬವರ ಮಾವಿನ ತೋಟದಲ್ಲಿ ವೀರಭದ್ರ ಅವರು ಕಳೆದ ಮೂರ್ನಾಲ್ಕು ತಿಂಗಳಿಂದ ಕಾವಲು ಕಾಯುವ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಕಾಡಾನೆ ದಾಳಿ ಮಾಡಿದ್ದು, ವೀರಭದ್ರ ಅವರನ್ನು ತುಳಿದು ಕೊಂದಿದೆ.

ವೀರಭದ್ರ ಸಾವಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ವೀರಭದ್ರ ಕುಟುಂಬಕ್ಕೆ ನಿಯಮಾನುಸಾರ 15 ಲಕ್ಷ ರೂ. ಪರಿಹಾರವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಎಲ್ಲಿ ಹೆಚ್ಚಿನ ಆನೆಗಳ ದಾಳಿ ಪ್ರದೇಶವಿದೆಯೋ ಅಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಿ ಇಂತಹ ಅನಾಹುತಗಳನ್ನು ತಪ್ಪಿಸಬೇಕು. ಅದಕ್ಕಾಗಿ, ಮುಂದಿನ ಬಜೆಟ್‌ನಲ್ಲಿ ಹೆಚ್ಚು ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬಿಜೆಪಿ ಸೋಲಿಸಿ ಜಾತ್ಯಾತೀತ ಅಭ್ಯರ್ಥಿ ಗೆಲ್ಲಿಸಿ: ಡಿವೈಎಫ್‌ಐ ಕರೆ

ಬಿಜೆಪಿಯನ್ನು ಸೋಲಿಸಿ ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಡಿವೈಎಫ್‌ಐ ಕರೆ ನೀಡಿದ್ದಾರೆ. ಈ...

ಚಿತ್ರದುರ್ಗ | ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಚಿವ ಎಚ್. ಆಂಜನೇಯ

ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು...

ಉಡುಪಿ | ಪ್ರಧಾನಿ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುವೆ: ಮಾಜಿ ಸಚಿವ ಕಿಮ್ಮನೆ ರತ್ನಾಕರ್

ʼಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆʼ ಎನ್ನುವ ಮೂಲಕ...

ಬೀದರ್‌ | ಪ್ರೇಯಸಿ ಮದುವೆ ದಿನವೇ ಯುವಕ ನಿಗೂಢ ಸಾವು; ಕೊಲೆ ಶಂಕೆ

ಪ್ರೇಯಸಿಯ ಮದುವೆ ದಿನವೇ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಧಾರುಣ ಘಟನೆ ಬೀದರ್‌...