ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟಿನ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡುವ ಮೂಲಕ ಜೈಲಿನಿಂದ ಹೊರಬರಲು ಅನುವು ಮಾಡಿಕೊಟ್ಟಿದೆ. ಇದು ಸತ್ಯಕ್ಕೆ ಸಂದ ಜಯ, ಸತ್ಯ ಮೇವ ಜಯತೆ ಎಂದ ರಾಮನಗರ ಜಿಲ್ಲಾಧ್ಯಕ್ಷರಾದ ಎಸ್. ಬೈರೇಗೌಡ ಹರ್ಷ ವ್ಯಕ್ತಪಡಿಸಿದರು.
ರಾಮನಗರದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಹಾಗೂ ದೆಹಲಿಯ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವುದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಾಚರಿಸಿದರು.
ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾ. ಸೂರ್ಯ ಕಾಂತ್ ಅವರ ದ್ವಿಸದಸ್ಯ ಪೀಠವು, 6 ತಿಂಗಳ ಜೈಲು ಶಿಕ್ಷೆಯ ನಂತರ ಕೇಜ್ರಿವಾಲ್‌ರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇದನ್ನು ಓದಿದ್ದೀರಾ? ಜಾತಿ ನಿಂದನೆ ಪ್ರಕರಣ: ಆಂಧ್ರಕ್ಕೆ ಪರಾರಿಯಾಗುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಬಂಧನ
ಆ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು, ಜಿಲ್ಲಾ ಜಂಟಿ ಕಾರ್ಯದರ್ಶಿ ಕೌಶಿಕ್, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಗಂಗಾಧರ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದುಲ್ಲಾ ಖಾನ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಭಶೀರ್ ಅಹಮದ್ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
