ರಾಮನಗರ | ಪಡಿತರ ಅಕ್ಕಿ ಕಳವು ಪ್ರಕರಣ; ಗೋದಾಮಿನ ವ್ಯವಸ್ಥಾಪಕನೇ ಆರೋಪಿ

Date:

Advertisements

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಕೇಳಿಬಂದಿದ್ದ ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಗೋದಾಮಿನ ವ್ಯವಸ್ಥಾಪಕನಾಗಿದ್ದ ಚಂದ್ರಶೇಖರ್ ಎಂಬಾತನ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಆತನೇ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾನೆಂದು ಆರೋಪಿಸಲಾಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣದ ಟಿಎಪಿಸಿಎಂಎಸ್‌ ಗೋದಾಮಿನಲ್ಲಿ 1,500 ಕ್ವಿಂಟಾಲ್ ಅಕ್ಕಿ ಕಳುವಾಗಿದೆ ಎಂದು ಬುಧವಾರ ಸುದ್ದಿಯಾಗಿತ್ತು. ಅಕ್ಕಿ ಬಂದ ಒಂದೇ ವಾರದಲ್ಲಿ ಅಕ್ಕಿ ಕಳುವಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಚನ್ನಪಟ್ಟಣ ಪೊಲೀಸರು, ಗೋದಾಮಿನ ನೌಕರ ಚಂದ್ರು ಎಂಬಾತನನ್ನು ಬಂಧಿಸಿದ್ದಾರೆ.

ಟಿಎಪಿಸಿಎಂಎಸ್‌ ಗೋದಾಮಿನಿಂದ ಚನ್ನಪಟ್ಟಣ ತಾಲೂಕಿನ 65 ನ್ಯಾಯಬೆಲೆ ಅಂಗಡಿಗಳಿಗೆ ಪಡಿತರವನ್ನು ಸರಬರಾಜು ಮಾಡಲಾಗುತ್ತದೆ. ಅದಕ್ಕಾಗಿ, ಕಳೆದ ವಾರ 1,400 ಕ್ವಿಂಟಾಲ್ ಪಡಿತರ ಅಕ್ಕಿ ಗೋದಾಮಿಗೆ ಬಂದಿತ್ತು. ಎರಡು ತಿಂಗಳ ಪಡಿತರ ವಿತರಣಗಾಗಿ ಒಟ್ಟಿಗೆ ಅಕ್ಕಿ ಬಂದಿತ್ತು. ಈ ಹಿಂದೆ ಗೋದಾಮಿನಲ್ಲಿ ಉಳಿದಿದ್ದ ಅಕ್ಕಿ ಮತ್ತು ಇತ್ತೀಚೆಗೆ ಬಂದಿದ್ದ ಅಕ್ಕಿಯಲ್ಇ 1,500 ಅಕ್ಕಿ ಕಳುವಾಗಿತ್ತು ಎನ್ನಲಾಗಿದೆ.

Advertisements

ಪ್ರಕರಣದ ಹಿನ್ನೆಲೆಯಲ್ಲಿ ಗೋದಾಮನ್ನು ಸೀಜ್ ಮಾಡಲಾಗಿದ್ದು, ಅದರ ಪರವಾನಗಿಯನ್ನು ಅಧಿಕಾರಿಗಳು ರದ್ದು ಮಾಡಿದ್ದಾರೆ.

ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಆಹಾರ ಇಲಾಖೆಯ ಉಪನಿರ್ದೇಶಕಿ ರಮ್ಯಾ, “ಇನ್ನು ಮುಂದೆ ಆಹಾರ ಇಲಾಖೆಯ ಗೋದಾಮಿನಿಂದಲೇ ಪಡಿತರ ಸರಬರಾಜು ಮಾಡಲಾಗುತ್ತದೆ. ಅಕ್ಕಿ ಕಳವು ಹಿನ್ನೆಲೆ ಡಿಸೆಂಬರ್ ತಿಂಗಳ ಪಡಿತರ ವಿತರಣೆ ವಿಳಂಬವಾಗುವ ಸಾಧ್ಯತೆಯಿದೆ. ಹೆಚ್ಚುವರಿ ಅಕ್ಕಿ ಪೂರೈಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X