ರಾಮನಗರ | ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಮೂವರು ಉಪನ್ಯಾಸಕರಿಂದ ಕಿರುಕುಳ

Date:

Advertisements

ಕಾಲೇಜು ವಿದ್ಯಾರ್ಥಿನಿಯರಿಗೆ ಉಪನ್ಯಾಸಕರೇ ಮದ್ಯ ಕುಡಿಸಿ, ಡಾನ್ಸ್‌ ಮಾಡುವಂತೆ ಕಿರುಕುಳ ನೀಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ. ಮೂವರು ಉಪನ್ಯಾಸಕರ ವಿರುದ್ಧ ಕ್ರಮ ಕೈಗೊರ್ಳಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶ ನೀಡಿದೆ.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತವರು ಕ್ಷೇತ್ರ ಕನಕಪುರದಲ್ಲಿಯೇ ಘಟನೆ ನಡೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಕನಕಪುರದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರರಾದ ವಿಶ್ವನಾಥ್​, ಲಕ್ಷ್ಮೀಶ್ ಹಾಗೂ ನಾಗೇಶ್ ಎಂಬವರು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಅಕ್ಟೋಬರ್​​​ 09ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಾಲೇಜಿನಿಂದ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆಂದು ಅಕ್ಟೋಬರ್ 5ರಿಂದ 10ರವರೆಗೆ ಮಡಿಕೇರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ, ಪ್ರಾಂಶುಪಾಲರೂ ಸೇರಿದಂತೆ ಉಪನ್ಯಾಸಕರು ಮದ್ಯ ಸೇವಿಸಿದ್ದಾರೆ. ಬಳಿಕ, ಮೂವರು ನಿದ್ಯಾರ್ಥಿನಿಯರನ್ನು ಕೋಣೆಯಲ್ಲಿ ಕೂಡಿಹಾಕಿಕೊಂಡು ಅವರಿಗೂ ಬಲವಂತವಾಗಿ ಬಿಯರ್ ಕುಡಿಸಿದ್ದಾರೆ. ನಂತರ, ಡಾನ್ಸ್‌ ಮಾಡುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಾರೆ ಎಂದು ತಿಳಿದುಬಂದಿದೆ.

Advertisements

ಪ್ರವಾಸದಿಂದ ಮರಳಿದ ಬಳಿಕ ಪ್ರವಾಸದಲ್ಲಿ ನಡೆದ ಘಟನೆಯ ಬಗ್ಗೆ ಕಾಲೇಜಿನ ಮಹಿಳಾ ಉಪನ್ಯಾಸಕರ ಬಳಿ ವಿದ್ಯಾರ್ಥಿನಿಯರು ಹೇಳಿಕೊಂಡಿದ್ದಾರೆ. ವಿದ್ಯಾರ್ಥಿನಿಯರ ಅಳಲನ್ನು ಗಂಭೀರವಾಗಿ ಪರಿಗಣಿಸದ ಉಪನ್ಯಾಸಕಿಯರು ‘ಕಾಲೇಜು ಅಂದ ಮೇಲೆ ಇದೆಲ್ಲ ಕಾಮನ್’ ಎಂಬ ಉಡಾಫೆ ಉತ್ತರ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಳಿಕ, ವಿದ್ಯಾರ್ಥಿನಿಯರು ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಆಯೋಗವು ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ಆರೋಪಿತಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ. ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ಸಲ್ಲಿಸುವಂತೆಯೂ ನಿರ್ದೇಶಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X