ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಬಿಜೆಪಿ–ಜೆಡಿಎಸ್ ಮೈತ್ರಿ ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಇನ್ನೇನು ಕೆಲವೇ ಹೊತ್ತಲ್ಲಿ ಅತಿಥಿಗಳು, ನಾಯಕರು ಆಗಮಿಸಲಿದ್ದರು. ಮತದಾರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ ಭೋಜನ ಕೂಟ ಆಯೋಜನೆ ಮಾಡಿದ್ದಾರೆ. ಕುಮಾರಸ್ವಾಮಿ ಅವರ ತೋಟದ ಮನೆಯಿಂದ ಬಾಡೂಟ, ಮದ್ಯದ ವಾಸನೆ ಹೊರ ಬರುತ್ತಿದೆ ಎಂದು ಕಾಂಗ್ರೆಸ್ ಕೂಡ ಆರೋಪ ಮಾಡಿತ್ತು.
ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ | ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಈ ವಿಚಾರ ತಿಳಿದ ಚುನಾವಣಾ ಅಧಿಕಾರಿಗಳು ಧಿಡೀರನೆ ದಾಳಿ ನಡೆಸಿದ್ದು, ಚಿಕನ್, ಮಟನ್ ಹಾಗೂ ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಚುನಾವಣಾ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲು ಮುಂದಾಗಿದ್ದಾರೆ. ಬಾಡೂಟವೆಂದು ಊಟಕ್ಕೆ ಬಂದ ಜನರಿಗೆ ನಿರಾಸೆಯಾಗಿದ್ದು, ಸಪ್ಪೆ ಮುಖ ಹಾಕಿಕೊಂಡು ಮನೆಕಡೆ ವಾಪಸ್ ಆಗುತ್ತಿದ್ದಾರೆ.