ರಾಮನಗರ | ಕಾಂಗ್ರೆಸ್ ಗಿಫ್ಟ್ ಕಾರ್ಡ್‌ಗಳಿಗೆ ನಾವೇ ಗಿಫ್ಟ್ ಕೊಡುತ್ತೇವೆ: ಎ ಮಂಜುನಾಥ್

Date:

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣರವರು ಮತದಾರರಿಗೆ ನೀಡಿದ ಗಿಫ್ಟ್ ಕಾರ್ಡ್‌ಗಳನ್ನು ನಮಗೆ ನೀಡಿದರೆ, ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಗಿಫ್ಟ್ ನಾವೇ ನೀಡಲು ಸಿದ್ಧರಿದ್ದೇವೆ ಎಂದು ಮಾಜಿ ಶಾಸಕ ಎ ಮಂಜುನಾಥ್ ಹೇಳಿದರು.

- Advertisement -

ಮಾಗಡಿ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಜೆಡಿಎಸ್, ಬಿಜೆಪಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಬಾಲಕೃಷ್ಣರವರು ಮತದಾರರಿಗೆ ಗಿಫ್ಟ್ ಕಾರ್ಡುಗಳನ್ನು ನೀಡಿ ಮತವನ್ನು ಪಡೆದು ಜಯಶೀಲರಾಗಿದ್ದಾರೆ. ನಂತರ ಕಾರ್ಡ್‌ಗಳಿಗೆ ಯಾವುದೇ ರೀತಿಯ ಗಿಫ್ಟ್‌ಗಳನ್ನು ನೀಡದೆ ಮತದಾರರಿಗೆ ವಂಚಿಸಿದ್ದಾರೆ. ಮತದಾನ ನಡೆದು ಇಲ್ಲಿಯವರೆಗೂ ಯಾವುದೇ ರೀತಿಯ ಗಿಫ್ಟ್‌ಗಳನ್ನು ನೀಡಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈಗ ನಮ್ಮ ಕಾರ್ಯಕರ್ತರಿಗೆ ತಿಳಿಸಿ ಗಿಫ್ಟ್ ಕಾರ್ಡ್‌ಗಳನ್ನು ನಮಗೆ ನೀಡಿ ತಮ್ಮ ಹೆಸರು ಮತ್ತು ಫೋನ್ ನಂಬರ್ ಬರೆಸಿದರೆ ನಾವೇ ಗಿಫ್ಟ್‌ಗಳನ್ನು ತಮಗೆ ಕೊಡುತ್ತೇವೆ ಎಂದರು.

10ರಿಂದ 15 ಸಾವಿರ ಬೆಲೆಬಾಳುವ ಗಿಫ್ಟ್ ಗಳನ್ನು ಕೊಡುತ್ತೇವೆ ಎಂದು ಶಾಸಕ ಬಾಲಕೃಷ್ಣ ಮತದಾರರಿಗೆ ವಂಚಿಸಿದ್ದರು. ಈಗ ಗಿಫ್ಟ್ ಕಾರ್ಡ್ ಗಳು ಹಾಳಾಗುತ್ತಿದ್ದು ಕಾರ್ಡ್ ಒಳಗೆ ಇರುವ ಬಾರ್ ಕೋಡ್ ಗಳ ಅವಧಿ ಮುಗಿಯುತ್ತಿರುವುದರಿಂದ ನಾವೇ ಗಿಫ್ಟ್ ಕೊಡಲು ಮುಂದಾಗಿದ್ದೇವೆ ಎಂದರು.

ಗಿಫ್ಟ್ ಕಾರ್ಡ್ ಗಳ ಮೂಲಕ ಗೆದ್ದಿರುವ ಅಭ್ಯರ್ಥಿಯನ್ನು ಮತ್ತೇ ಈ ಗಿಫ್ಟ್ ಕಾರ್ಡ್ ಮೂಲಕವೇ ಸೋಲಿಸುವ ಗುರಿಯನ್ನು ಇಟ್ಟುಕೊಂಡಿದ್ದು, ಜೆಡಿಎಸ್ ಮತ್ತು ಬಿಜೆಪಿ ಒಗ್ಗೂಡಿ ಮುಂಬರುವ ಚುನಾವಣೆಯನ್ನು ಎದುರಿಸುತ್ತೇವೆ ಎಂಬುದು ಗೊತ್ತಿದೆ. ಚುನಾವಣೆ ಬರಲಿ ನಮ್ಮ ಹತ್ತಿರವು ಸಾಕಷ್ಟು ಬಾಣಗಳಿದ್ದು ಎಲ್ಲದಕ್ಕೂ ಸರಿಯಾದ ಉತ್ತರ ಕೊಡುತ್ತೇವೆ ಎಂದು ಎ.ಮಂಜುನಾಥ್ ತಿಳಿಸಿದರು.

ಇದೆ ವೇಳೆ ಬಿಜೆಪಿ ಯುವ ಮುಖಂಡ ಪ್ರಸಾದ್ ಗೌಡ, ರಾಜೇಶ್, ಬಾಲಾಜಿ, ಹನುಮಂತೇಗೌಡ, ಜೆಡಿಎಸ್ ಮುಖಂಡರಾದ ಗುಡ್ಡೆಗೌಡ, ನಯಾಜ್, ಶಿವರಾಮ, ಪುರಸಭಾ ಸದಸ್ಯ ಕೆ.ವಿ.ಬಾಲು, ಎಂ.ಎನ್. ಮಂಜು, ಕೆಂಪೇಗೌಡ, ಕೆಂಪಸಾಗರ ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...