ಚಾಮರಾಜ ನಗರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತಾ ಹಿ ಸೇವಾ-2024ರ ಅಂಗವಾಗಿ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆ ಹಾಗೂ ಸ್ವಚ್ಛತಾ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಿತು.
ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊನಾ ರೋತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್, ಮಹಿಳೆಯರಿಗೆ ಮನೆಯ ಜವಾಬ್ದಾರಿ,ಮಕ್ಕಳ ಕಾಳಜಿ, ದೈನಂದಿನ ಜವಾಬ್ದಾರಿಯ ಜಂಜಾಟದಲ್ಲಿ ಸಮಯವೇ ಸಿಗದಂತಾಗಿದೆ. ಬೆಳಗ್ಗೆಯಿಂದ ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿಸಿಕೊಂಡಿರುತ್ತಾರೆ. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಆಟ, ಮನೋರಂಜನೆ ಇತ್ಯಾದಿ ವಾರಕ್ಕೊಮ್ಮೆ, ರಜೆದಿನಗಳಿಗೊಮ್ಮೆ ಅನ್ನುವಂತಾಗಿದೆ ಎಂದರು.

“ಹಲವು ನಿಭಿಡತೆಗಳ ಹೊರತಾಗಿಯೂ ಸಾಮಾಜಿಕ ಕರ್ತವ್ಯಗಳು ನಿಭಾಯಿಸುವಲ್ಲಿ ಮಹಿಳೆಯರು ಮುಂದಿದ್ದಾರೆ. ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಎಂದಿಗೂ ಹಿಂದೆ ಬಿದ್ದಿಲ್ಲ. ಸಮಯ, ಬಿಡುವು ಸಿಕ್ಕಾಗ ಇಂತಹ ಕಾರ್ಯಕ್ರಮಗಳಲ್ಲಿ ಒಬ್ಬರಿಗೊಬ್ಬರು ಭೇಟಿಯಾಗುವ ಸಂದರ್ಭ ಸಂತೋಷ ಕೊಡುವಂತಹದ್ದು” ಎಂದು ಜಿಲ್ಲಾಧಿಕಾರಿ ಹೇಳಿದರು.
ಇದನ್ನು ಓದಿದ್ದೀರಾ? ಬೆಂಗಳೂರು | ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್: ಮಹಿಳೆ ವಿರುದ್ಧ ಎಸ್‌ಡಿಪಿಐ ಮುಖಂಡನಿಂದ ದೂರು
ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನಗಳನ್ನು ವಿತರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ ಲಕ್ಷ್ಮೀ, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಚಾಮರಾಜನಗರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಪೂರ್ಣಿಮಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಪಿಎಲ್‍ಎಫ್ ಸ್ವಸಹಾಯ ಗುಂಪಿನ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
