ರಾಣೆಬೆನ್ನೂರು | ಸಮರ್ಪಕ ಬಸ್ ವ್ಯವಸ್ಥೆ, ಹಾಸ್ಟೆಲ್ ಮಂಜೂರಿಗೆ ಆಗ್ರಹಿಸಿ ಎಸ್‌ಎಫ್‌ಐಯಿಂದ ಪ್ರತಿಭಟನೆ

Date:

Advertisements

ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಹಾಗೂ ಹಾಸ್ಟೆಲ್ ಮಂಜೂರು ಮಾಡಲು ಶಾಸಕರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು.

ರಾಣೆಬೆನ್ನೂರು ಪಟ್ಟಣದ ಮಾರುತಿ ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಿಂದ ಬಸ್ ನಿಲ್ದಾಣ ಮುಂದೆ ಬೃಹತ್ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್, “ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಬಸ್ಸಿನ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸಕರ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ ಡಿಪೋ ಮ್ಯಾನೇಜರ್ ವಿದ್ಯಾರ್ಥಿಗಳೊಂದಿಗೆ ಸಭೆ ಮಾಡಬೇಕು. ಎಸ್ಎಫ್ಐ ಹೋರಾಟದ ಪ್ರತಿಫಲವಾಗಿ ಜಿಲ್ಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 4 ಹಾಸ್ಟೆಲ್ ಮಂಜೂರು ಆಗಿವೆ. ಅದರಲ್ಲಿ ಕನಿಷ್ಠ ಎರಡು ಹಾಸ್ಟೆಲ್ ರಾಣೆಬೆನ್ನೂರು ನಗರಕ್ಕೆ ಕೊಡಬೇಕು” ಎಂದು ಆಗ್ರಹಿಸಿದರು.

Advertisements

ರಾಣೆಬೆನ್ನೂರು 1

ಉಪಾಧ್ಯಕ್ಷ ನಿಹಾಲ್ ಖಾನ್ ಗಂಗಾವತಿ ಮಾತನಾಡಿ, “ವಿದ್ಯಾರ್ಥಿಗಳು ಪ್ರತಿದಿನ ವಿದ್ಯಾಭ್ಯಾಸದ ಉದ್ದೇಶದಿಂದ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಂದ ತಾಲೂಕು ಕೇಂದ್ರದ ಕಾಲೇಜುಗಳಿಗೆ ಬರುತ್ತಾರೆ. ತಾಲೂಕು ಕೇಂದ್ರ ಬಸ್ ನಿಲ್ದಾಣದಿಂದ ಬಹುತೇಕ ಶಾಲಾ-ಕಾಲೇಜುಗಳು, ಹಾಸ್ಟೆಲ್‌ಗಳು ನಗರದಿಂದ ಸರಿಸುಮಾರು ದೂರದಲ್ಲಿದೆ. ಇದರಿಂದಾಗಿ ದಿನ ನಿತ್ಯವೂ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಸರಿಯಾಗಿ ಬಸ್‌ಗಳನ್ನು ಬಿಡದೆ ವಿದ್ಯಾರ್ಥಿಗಳಿಗೆ ಸೇರಿದಂತೆ ಸಾರ್ವಜನಿಕರಿಗೂ ಅನಾನುಕೂಲವಾಗಿದೆ” ಎಂದರು.

ವಿದ್ಯಾರ್ಥಿ ಮುಖಂಡ ಗೌತಮ್ ಸಾವಕ್ಕನವರ್ ಮಾತನಾಡಿ, “ಸಾರಿಗೆ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಿನ್ನಡೆಯಾಗುತ್ತಿದೆ. ಆದ್ದರಿಂದ ಕಾಲೇಜಿಗೆ ಬಸ್ ವ್ಯವಸ್ಥೆ ಸೇರಿದಂತೆ ನಗರ ಸಾರಿಗೆ ಬಸ್ ಬಿಡಲು ಅನೇಕ ಬಾರಿ ಹೋರಾಟ ಮಾಡಿ ಮನವಿ ಕೊಟ್ಟಿದ್ದೇವೆ. ಈ ಹಿಂದೆ ಎಸ್ಎಫ್ಐ ಹೋರಾಟ ಪ್ರತಿಫಲವಾಗಿ ಬಸ್ ನಿಲ್ದಾಣದಿಂದ ಮಾರುತಿ ನಗರ ಮಾರ್ಗವಾಗಿ ಕಾಲೇಜು ತನಕ ಬಸ್ ಬರುತ್ತಿತು. ಆ ಯೋಜನೆಯನ್ನು ಮುಂದುವರೆಸಬೇಕೆಂದು ಹಾಗೂ ನಗರ ಸಾರಿಗೆ ಸೇರಿದಂತೆ ಅನೇಕ ಗ್ರಾಮೀಣ ಪ್ರದೇಶಗಳಿಗೆ ಈ ಕೂಡಲೇ ಕೆಎಸ್ಆರ್‌ಟಿಸಿ ಸಂಸ್ಥೆಯು ಸಮರ್ಪಕವಾಗಿ ಬಸ್ ಸೌಲಭ್ಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ranibennur 1

ಪ್ರತಿಭಟನಾ ಸ್ಥಳಕ್ಕೆ ಶಾಸಕ ಪ್ರಕಾಶ್ ಕೋಳಿವಾಡ ಆಗಮಿಸಿ ಮನವಿ ಪತ್ರ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು, “ಕೂಡಲೇ ವಿದ್ಯಾರ್ಥಿ ಮುಖಂಡರ ಜೊತೆಗೆ ಡಿಪೋ ಮ್ಯಾನೇಜರ್ ಹಾಗೂ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಪೂರೈಸಲು ಕ್ರಮ ಕೈಗೊಳ್ಳುತ್ತೇನೆ” ಎಂದು ಭರವಸೆ ನೀಡಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಮಹೇಶ್ ಮರೋಳ, ಶಾಂಭವಿ ಆಡಿನವರ, ಶಕುಂತಲಾ ಬಿ, ಬಿಂದು ವಿ ಎಚ್, ನಿಂಗರಾಜ್ ದಾನಮ್ಮನವರ, ಅರುಣ ಕೆ ಲಮಾಣಿ, ನಾಗರಾಜ್ ಭಾಗಲರ, ಸಿಂಧು ಆ ಚಲವಾದಿ, ಭವಾನಿ ಬಣಕಾರ್, ನಂದಿತಾ ರಿತ್ತಿ, ಪೂಜಾ ಜೆ ಸಿದ್ದನಕೋಟೆ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ranibennur

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X