ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ನ್ಯಾಯಾಲಯವು ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ಆದೇಶಿಸಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋನವಾಟ್ಲಾ ಗ್ರಾಮದ ನಿವಾಸಿ ಹುಲ್ಲೇಶ(25) ಶಿಕ್ಷೆಗೆ ಗುರಿಯಾದ ಆರೋಪಿ. ಮೇ 2019ರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಸಿಪಿಐ ಯಶವಂತ್ ಎಚ್.ಬಿಸ್ನಳ್ಳಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿದ ಬಳಿಕ ಆರೋಪ ಸಾಬೀತಾದ ಹಿನ್ನೆಲೆ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಆರೋಪಿಗೆ 10 ಜೈಲು ಶಿಕ್ಷೆ, 15000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಇದನ್ನೂ ಓದಿ : ಯುವತಿ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ; ಮದುವೆಯಾಗುತ್ತೇನೆಂದು ವಂಚನೆ
This video cannot be played in your browser. Open the video directly
ಸರ್ಕಾರ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ 4,50,000 ರೂ. ಪರಿಹಾರ ನೀಡಬೇಕೆಂದೂ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ.ಮಂಜುನಾಥ ವಾದ ಮಂಡಿಸಿದರು.





