ಉಡುಪಿ ಜಿಲ್ಲೆಯ ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗೆ ಡ್ರಗ್ಸ್ ಪೂರೈಸಿದ್ದ ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಬಂಧಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್, ಅಭಯ್ ಪ್ರಮುಖ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ನೀಡಿದ್ದಾಗಿ ಪ್ರಥಮವಾಗಿ ತನಿಖೆಯಲ್ಲಿ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ಕೃತ್ಯ ಎಸಗಿದ ಮೇಲೆ, ಪ್ರಮುಖ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಪಟ್ಟಿದ್ದು, ಆತನನ್ನು ಬಂಧಿಸಲಾಗಿದೆ. ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ವರದಿ ಫಲಶೃತಿ | ವಡ್ಡರ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಜೇವರ್ಗಿ ತಹಶೀಲ್ದಾರ್
ಇದೇ ರೀತಿಯಲ್ಲಿ NDPS ಪ್ರಕರಣದಲ್ಲಿ ಅಭಯ್‌ನನ್ನು ಬಂಧಿಸಲಾಗಿದೆ. ಅಲ್ಲದೇ, ಇನ್ನಿಬ್ಬರನ್ನು ಸಂಶಯಿತ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಅವರನ್ನು ತನಿಖೆ ನಡೆಸಿ, ಈ ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಿ, ಆದಷ್ಟು ಬೇಗನೆ ಪ್ರಕರಣವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ತಿಳಿಸಿದ್ದಾರೆ.
