ಅತ್ಯಾಚಾರ ಪ್ರಕರಣ | ಆರೋಪಿಯೊಂದಿಗೆ ವಿವಾಹವಾಗಲು ಒಪ್ಪಿದ ಸಂತ್ರಸ್ತೆ; ಆರೋಪಿಗೆ ಒಂದು ತಿಂಗಳ ಗಡುವು ನೀಡಿದ ಹೈಕೋರ್ಟ್‌

Date:

Advertisements

ಅತ್ಯಾಚಾರಕ್ಕೆ ಕೊಳಗಾಗಿದ್ದ ಸಂತ್ರಸ್ತೆ (ಈಗ ವಯಸ್ಕಳು) ಆರೋಪಿಯನ್ನು ವಿವಾಹವಾಗುವ ಇಂಗಿತ ವ್ಯಕ್ತಪಡಿಸಿದ ನಂತರ ಆರೋಪಿ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಸಂತ್ರಸ್ತೆಯನ್ನು ವಿವಾಹವಾಗಲು ಆರೋಪಿಗೆ ಒಂದು ತಿಂಗಳ ಗಡುವು ನೀಡಿದೆ.

ಕಾಮುಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಆರೋಪಿಯನ್ನು ಬಂಧಿಸಲಾಗಿತ್ತು. ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆ 18ನೇ ವಯಸ್ಸಿಗೆ ಕಾಲಿಟ್ಟಿದ್ದು, ಆಕೆ ಆರೋಪಿಯನ್ನು ವಿವಾಹವಾಗುವ ಇಂಗಿತ ವ್ಯಕ್ತಪಡಿಸಿದ್ದಾಳೆ.

ಮಂಗಳವಾರ, ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದ ಸಂತ್ರಸ್ತೆ ಮತ್ತು ಆಕೆಯ ತಂದೆ, ‘ವಿಚಾರಣೆಯನ್ನು ರದ್ದುಪಡಿಸಲು ತಮ್ಮ ಅಭ್ಯಂತರವಿಲ್ಲ’ ಎಂದು ತಿಳಿಸಿದ್ದಾರೆ.

Advertisements

ಸಂತ್ರಸ್ತೆ ತನ್ನ ಅಫಿಡವಿಟ್‌ನಲ್ಲಿ “ನಾನು ಆರೋಪಿಯನ್ನು ವಿವಾಹವಾಗಲು ಉದ್ದೇಶಿಸಿದ್ದೇನೆ. ಆತನೊಂದಿಗೆ ಸಂತೋಷದ ವೈವಾಹಿಕ ಜೀವನ ನಡೆಸಲು ಬಯಸಿದ್ದೇನೆ. ಆರೋಪಿಯೂ ಅದಕ್ಕೆ ಒಪ್ಪಿದ್ದಾನೆ. ಹೀಗಾಗಿ, ನ್ಯಾಯಾಲಯವು ಆತನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ನನ್ನ ಯಾವುದೇ ಅಭ್ಯಂತರವಿಲ್ಲ” ಎಂದು ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದ ಆರೋಪಿಯೂ ಸಂತ್ರಸ್ತೆಯನ್ನು ವಿವಾಹವಾಗಲು ಸಿದ್ದನಿದ್ದೇನೆ ಎಂದು ಹೇಳಿದ್ದಾನೆ.

ಸಂತ್ರಸ್ತೆ ಮತ್ತು ಆರೋಪಿಯ ವಾದ ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡ ಅವರಿದ್ದ ಪೀಠವು, ಆರೋಪಿಯ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಿದೆ. ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಸೂಚನೆ ನೀಡಿದೆ.

“ನ್ಯಾಯಾಲಯದ ಮುಂದೆ ಹಾಜರಾದ ಸಂತ್ರಸ್ತೆಯು ಆರೋಪಿಯೊಂದಿಗೆ ಮದುವೆಯಾಗಲು ಉದ್ದೇಶಿಸಿರುವುದಾಗಿ ಹೇಳಿದ್ದಾರೆ. ಆರೋಪಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರೆಸಿದರೆ ಆರೋಪಿಯ ಸೆರೆವಾಸಕ್ಕೆ ಕಾರಣವಾಗುತ್ತದೆ. ಹೀಗಾಗಿ, ಆರೋಪಿ ವಿರುದ್ಧದ ವಿಚಾರಣೆಯನ್ನು ಒಂದು ತಿಂಗಳೊಳಗೆ ಸಂತ್ರಸ್ತೆಯನ್ನು ಮದುವೆಯಾಗುವ ಷರತ್ತಿನ ಮೇಲೆ ಮುಂದೂಡಲಾಗಿದೆ” ಎಂದು ಹೈಕೋರ್ಟ್‌ ಹೇಳಿದೆ.

“ಆರೋಪಿಯು ಆದೇಶ ಬಂದ ಒಂದು ತಿಂಗಳೊಳಗೆ ಸಂತ್ರಸ್ತೆಯೊಂದಿಗೆ ವಿವಾಹವಾಗಬೇಕು. ವಿವಾಹವನ್ನು ಸಕ್ಷಮ ಪ್ರಾಧಿಕಾರದ ಮುಂದೆ ನೋಂದಾಯಿಸಿಕೊಳ್ಳಬೇಕು” ಎಂದು ಷರತ್ತು ವಿಧಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X