ಬೀದರ್‌ | ದಲಿತ ಯುವತಿಯ ಅತ್ಯಾಚಾರ, ಕೊಲೆ : ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

Date:

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ, ಕೊಲೆ ಕೃತ್ಯ ಖಂಡಿಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ಹುಮನಾಬಾದ್‌ ಪಟ್ಟಣದ ಪ್ರವಾಸಿ ಮಂದಿರದಿಂದ ಡಾ.ಅಂಬೇಡ್ಕರ್ ಅವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದರು. ರಾಷ್ಟ್ರಪತಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಾಲ್ಲೂಕು ಆಡಳಿತಕ್ಕೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ʼಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ 22 ವರ್ಷದ ದಲಿತ ಯುವತಿಯ ಅತ್ಯಾಚಾರ, ಕೊಲೆ ಘಟನೆ ಇಡೀ ಮಾನವ ಸಮಾಜ ತಲೆತಗ್ಗಿಸುವ ಹೇಯ ಕೃತ್ಯ, ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಉತ್ತರಪ್ರದೇಶದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ ಸ್ಥಳೀಯ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆ ಕ್ರಮಕ್ಕೆ ಮುಂದಾಗುತ್ತಿಲ್ಲʼ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜನವರಿ 30ರಂದು ಯುವತಿ ನಾಪತ್ತೆಯಾಗಿದ್ದಳು. ಪೊಲೀಸರಿಗೆ ದೂರು ನೀಡಲಾಗಿತ್ತು. ಆದರೆ ಪತ್ತೆ ಹಚ್ಚುವಲ್ಲಿ ವಿಳಂಬವಾಗಿ, ಫೆಬ್ರುವರಿ 1ನೇ ತಾರೀಖು ಕಾಲುವೆಯಲ್ಲಿ ಮೃತದೇಹ ಸಿಕ್ಕಿತ್ತು. ʼನಾಪತ್ತೆಯಾಗಿದ್ದ ನಮ್ಮ ಮಗಳನ್ನು ಕೊಲೆ ಮಾಡಲಾಗಿದೆ, ಆಕೆಯ ಕಣ್ಣುಗಳನ್ನು ಕಿತ್ತು ಹಾಕಲಾಗಿದೆ, ಮೃತದೇಹದ ಮೇಲೆ ಭೀಕರ ಗಾಯಗಳು ಕಂಡು ಬಂದಿದೆʼ ಎಂದು ಯುವತಿ ಕುಟುಂಬ ಹೇಳಿದೆ. ಆದರೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದರೂ ಅಯೋಧ್ಯೆಯ ಬಂದೋಬಸ್ತ್‌ನಲ್ಲಿದ್ದೇವೆ ಎಂದು ಹೇಳಿ ಯುವತಿಯ ಕೊಲೆಗೆ ಕಾರಣರಾಗಿದ್ದಾರೆʼ ಎಂದು ಕಿಡಿಕಾರಿದರು.

WhatsApp Image 2025 02 07 at 7.10.01 PM

ದಲಿತ ಅತ್ಯಾಚಾರ ಘಟನೆಗಳು ತಡೆಯಬೇಕಾದರೆ ತ್ವರಿತ ತನಿಖೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ವಿಧಿಸುವುದು ಅಗತ್ಯವಿದೆ. ಈ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಅಲ್ಲಿನ ಸರ್ಕಾರ ಎಚ್ಚರವಹಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ನರೇಗಾ ಪರಿಣಾಮಕಾರಿ ಅನುಷ್ಠಾನ : ತೋರಣಾ ಗ್ರಾಮ ಪಂಚಾಯಿತಿಗೆ ಪುರಸ್ಕಾರ

ಭಾರತೀಯ ದಲಿತ ಪ್ಯಾಂಥರ್ ತಾಲ್ಲೂಕಾಧ್ಯಕ್ಷ ಗಣಪತಿ ಅಷ್ಟೂರೆ, ಉಪಾಧ್ಯಕ್ಷ ಸಿದ್ದಾರ್ಥ್ ಜಾನವೀರ್ ಸೇರಿದಂತೆ ಪ್ರಮುಖರಾದ ಸುಶೀಲಕುಮಾರ್ ಭೋಲಾ, ಶಿವಕುಮಾರ್ ಮಾಡಗೂಳ್, ಯುವರಾಜ್ ಐಹೊಳಿ, ಶಶಿಕಾಂತ್ ಡಾಂಗೆ, ದೇವೇಂದ್ರ ಗದ್ದಾರ್, ಆಕಾಶ ಮೇಟಿ, ಪ್ರಭಾವತಿ, ಕಾವೇರಿ ಕಾಂಬಳೆ, ಮೀನಾಕ್ಷಿ, ಆನಂತ್ ಮಾಳಗೆ, ದಶರಥ ದಾಂಡೇಕರ್, ಶಿವಕುಮಾರ್ ಸಾಗರ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...