ಬಳ್ಳಾರಿ| 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ದಾಖಲು

Date:

ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಅಪರಿಚಿತನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ. ಈ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

ಹತ್ತು ವರ್ಷಗಳ ಹಿಂದೆ ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ತೋರಣಗಲ್ಲಿಗೆ ಬಂದು ನೆಲೆಸಿರುವ ಜಾರ್ಖಂಡ ಮೂಲದ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಜಿಲ್ಲಾ ವರಿಷ್ಠಾಧಿಕಾರಿಗಳ ನೇತ್ರತ್ವದಲ್ಲಿ ಎರಡು ತಂಡ ರಚಿಸಲಾಗಿದೆ. ಸಿಸಿ ಟಿವಿಯಲ್ಲಿ ಸೆರೆಯಾದ ವಿಡಿಯೊ ಆಧರಿಸಿ ಆರೋಪಿ ಪತ್ತೆ ಕಾರ್ಯಾಚರಣೆ ಚುರುಕಾಗಿ ನಡೆಯುತ್ತಿದೆ ಎಂದು ತೋರಣಗಲ್ಲು ಠಾಣೆ ಪಿಎಸ್‌ಐ ಮಾಹಿತಿ ನೀಡಿದ್ದಾರೆ.

ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಗಿದೆ. ಘಟನೆ ನಡೆದ ರಾತ್ರಿಯೇ ಮಗುವಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದ್ದು ಮಗು ಅಪಾಯದಿಂದ ಪಾರಾಗಿದೆ. ಮಗುವಿನ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...