ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 65 ವರ್ಷದ ವೃದ್ಧನೊಬ್ಬ ಅತ್ಯಾಚಾರ ಎಸಗಿದ ಘಟನೆ ಆಳಂದ ತಾಲೂಕಿನ ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಕುರಿತು ಬಾಲಕಿ ತಾಯಿ ನೀಡಿದ ದೂರು ಆಧರಿಸಿ ಗೋರಕನಾಥ ಚವ್ಹಾಣ್ (65) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ಪಕ್ಕದ ಮನೆಯಲ್ಲಿ ಆರೋಪಿ ವಾಸಿಸುತ್ತಿದ್ದ, ಬಾಲಕಿ ಮನೆಗೆ ನುಗ್ಗಿ ಆಕೆಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
ಸಂತ್ರಸ್ತ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.