ಉಡುಪಿ | ವೇಷ ತೊಟ್ಟು ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುವ ರವಿ ಕಟಪಾಡಿ

Date:

ಜಾತಿ, ಧರ್ಮ, ಮತವೆಂದು ಬೀದಿ ಬೀದಿಯಲ್ಲಿ ಹೆಣ ಉರುಳುವ ಈ ಕಾಲದಲ್ಲೂ ಯಾವುದೇ ಸ್ವಾರ್ಥ ಇಲ್ಲದೆ ವೇಷ ತೊಟ್ಟು ಬಡವರ ಮಕ್ಕಳ ಗಂಭೀರ ಕಾಯಿಲೆಯ ಚಿಕಿತ್ಸೆಯ ನೆರವಿಗೆ ನಿಂತು ಅವರ ಜೀವ ಉಳಿಸಿ ಮನುಕುಲದ ಮಾನವೀಯತೆಗೆ ಸಾಕ್ಷಿ ಎಂಬಂತೆ ನಮ್ಮ ನಡುವೆ ಅಪರೂಪದಲ್ಲೊಬ್ಬ ಅಪರೂಪ ವ್ಯಕ್ತಿಯೇ ರವಿ ಕಟಪಾಡಿ.

- Advertisement -

ಉಡುಪಿ ಜಿಲ್ಲೆಯ ಕಟಪಾಡಿಯ ರವಿ ಕೂಲಿ ಕೆಲಸ ಮಾಡಿಕೊಂಡು ತನಗೆ ಸರಿಯಾದ ಸೂರಿಲ್ಲದೆ ಇತರರ ಸೇವೆಗೆ ಕಳೆದ ಹಲವಾರು ವರ್ಷಗಳಿಂದ ಕಾರ್ಯಪ್ರವೃತ್ತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
ವೇಷಧಾರಿ

ಬಡವರ, ಅನಾರೋಗ್ಯ ಪೀಡಿತ, ಯಾವುದೇ ಜಾತಿ ಧರ್ಮ ನೋಡದೆ ಪ್ರತಿ ವರ್ಷ ಅಷ್ಠಮಿಯ ದಿನ ವಿಶಿಷ್ಟ ವೇಷವನ್ನು ಧರಿಸಿ ಜನರ ಬಳಿ ತೆರಳಿ ಇವರ ತಂಡ ಸಹಾಯವನ್ನು ಯಾಚಿಸುತ್ತದೆ. ಹೀಗೆ ಯಾಚಿಸಿ ಸಾರ್ವಜನಿಕರರಿಂದ ಸಂಗ್ರಹಿಸಿದ್ದು ಒಂದು ಕೋಟಿ ಹದಿಮೂರು ಲಕ್ಷ. ಇಷ್ಟು ಹಣದಿಂದ ಈಗಾಗಲೇ ಅನಾರೋಗ್ಯ ಪೀಡಿತ ಮಕ್ಕಳಿಗೆ ನೆರವನ್ನು ನೀಡಿದ್ದಾರೆ. ರವಿ ಕಟಪಾಡಿ ಈಗ ಊರಿಗೆ ಮಾತ್ರವಲ್ಲದೆ ನಾಡಿನಾದ್ಯಂತ ತನ್ನ ವಿಶಿಷ್ಟ ಮಾನವೀಯ ಸೇವೆಯಿಂದಾಗಿ ಚಿರಿಪರಿಚಿತರಾಗಿದ್ದಾರೆ. ಈಗಾಗಲೇ ನೂರಾರು ಸನ್ಮಾನಗಳೂ ಬಂದಿವೆ. ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗ ಕರೋಡ್ ಪತಿಯಲ್ಲಿಯೋ ವಿಶೇಷ ಆಹ್ವಾನಿತರಾಗಿ ಅದರಿಂದ ಗಳಿಸಿದ ಹಣವನ್ನೂ ಕೂಡ ಬಡ ನಿರ್ಗತಿಕರಿಗೆ ನೆರವು ನೀಡಿದ್ದಾರೆ.

ಮಕ್ಕಳ ನೆರವಿಗೆ ವೇಷ

ವಿಶಿಷ್ಟ ವೇಷ ಧರಿಸಿ ಜನರನ್ನು ರಂಜಿಸುತ್ತಿದ್ದ ಸಮಾಜ ಸೇವಕ ರವಿ ಕಟಪಾಡಿ ಅವರು ಈ ಬಾರಿ ವಿಶಿಷ್ಟ ವೇಷದೊಂದಿಗೆ ಜನರನ್ನು ರಂಜಿಸಲು ಸಜ್ಜಾಗಿದ್ದಾರೆ. ಸೀ ಫೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಹಾಕಿ ತಿರುಗಾಟ ನಡೆಸಲಿದ್ದಾರೆ.

ರವಿ ಕಟಪಾಡಿ 1

ಪ್ರತಿ ವರ್ಷ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗಾಗಿ ವೇಷ ಧರಿಸುತ್ತಿದ್ದ ರವಿ ಕಟಪಾಡಿ ಅವರು, ಈ ಬಾರಿಯೂ ಅದನ್ನು ಮುಂದುವರಿಸಿದ್ದಾರೆ. ಕುಂದಾಪುರದ 2 ವರ್ಷದ ಮಗುವಿನ ಚಿಕಿತ್ಸೆಗಾಗಿ ಹಣ ಸಂಗ್ರಹ ಮಾಡಲು ನಿರ್ಧಾರ ಮಾಡಿದ್ದಾರೆ. ಆದರೆ ಈ ಬಾರಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ಜನರ ಬಳಿಗೆ ಹೋಗಿ ಬಾಕ್ಸ್‌ಗಳನ್ನು ಹಿಡಿದು ಹಣ ಸಂಗ್ರಹ ಮಾಡದಿರಲು ತೀರ್ಮಾನಿಸಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಭಾರೀ ಮಳೆ; ಕೃಷಿ ಹೊಂಡ ಭರ್ತಿ

ಈ ದಿನ.ಕಾಮ್ ಜೊತೆ ಮಾತನಾಡಿದ ರವಿ ಕಟಪಾಡಿ, “ಪ್ರತಿ ವರ್ಷದಂತೆ ಈ ಬಾರಿಯೂ ವೇಷ ಹಾಕುತ್ತಿದ್ದೇನೆ. ವೇಷದವರನ್ನು ನೋಡಿ ಬಾಗಿಲು ಹಾಕುತ್ತಿದ್ದರು. ಆದರೆ ನಮ್ಮ ತಂಡವನ್ನು ನೋಡಿ‌ ಬಾಗಿಲು ತೆಗೆದು ಅವರಾಗಿಯೇ ಬಂದು ಹಣವನ್ನು ನೀಡಿ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ. ಉದ್ಯಾವರ, ಉಡುಪಿ, ಮಲ್ಪೆ, ಪಡುಕೆರೆ ಮತ್ತು ಇತರ ಪ್ರದೇಶಗಳಲ್ಲಿ ತಮ್ಮ ಫ್ರೆಂಡ್ಸ್ ತಂಡ ತಿರುಗಾಟ ನಡೆಸಲಿದೆ. ಈ ಬಾರಿ ವೇಷ ಹಾಕಿದರೂ ಕೂಡಾ ಜನರ ಬಳಿಗೆ ತೆರಳಿ ಬಾಕ್ಸ್‌ನಲ್ಲಿ ಹಣ ಸಂಗ್ರಹ ಮಾಡುವುದಿಲ್ಲ. ಬದಲಾಗಿ ಯಾರಿಗಾದರೂ ನಮ್ಮ ಉದ್ದೇಶಕ್ಕೆ ಸಹಕಾರ ನೀಡಲು ಇಚ್ಚಿಸಿದ್ದಲ್ಲಿ ನಮ್ಮ ವಾಹನದ ಬಳಿಗೆ ಬಂದು ತಮ್ಮ ಧನಸಹಾಯವನ್ನು ನೀಡಬಹುದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...