ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ : ಯಾದಗಿರಿ ಮೂಲದ ಶಿವಲಿಂಗ ಕುಂಬಾರ ಸಾವು

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿರುವುದು ದೃಢವಾಗಿದೆ.

- Advertisement -

ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದ ಶಿವಲಿಂಗ ಚಂದಪ್ಪ ಕುಂಬಾರ (17) ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಹಲವು ವರ್ಷಗಳಿಂದ ಬೆಂಗಳೂರಿನ ಸಣ್ಣೂರಿನಲ್ಲಿ ಸಿಮೆಂಟ್ ಇಟ್ಟಿಗೆ ತಯಾರಿಸುವ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ತಿಮ್ಮಮ್ಮ ಚಂದಪ್ಪ ಕುಂಬಾರ ದಂಪತಿಗೆ ಓರ್ವ ಪುತ್ರಿ ಇಬ್ಬರು ಗಂಡು ಮಕ್ಕಳು. ಕೊನೆಯ ಪುತ್ರ ಶಿವಲಿಂಗ ಬೆಂಗಳೂರಿನ ಯಲಹಂಕ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದನು.

ಶಿವಲಿಂಗ ಬುಧವಾರ ಮಧ್ಯಾಹ್ನ ಐಪಿಎಲ್ ಫೈನಲ್ ಪಂದ್ಯದಲ್ಲಿ ಜಯಗಳಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ ವಿಜಯದ ಸಂಭ್ರಮ ನೋಡಲು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದ ಮಗನನ್ನು ತಾಯಿ ಫೋನ್ ಮೂಲಕ ಸಂಪರ್ಕಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಮೃತ ಶಿವಲಿಂಗನ ಜೇಬಿನಲ್ಲಿದ್ದ ಮೊಬೈಲ್ ನ ಕರೆ ಸ್ವೀಕರಿಸಿ ‘ನಿಮ್ಮ ಮಗನಿಗೆ ಆಕ್ಸಿಡೆಂಟ್ ಆಗಿದೆ. ಬೌರಿಂಗ್ ಆಸ್ಪತ್ರೆಗೆ ಬನ್ನಿ’ ಅಂತ ಪ್ರತಿಕ್ರಿಯಿಸಿದ್ದಾರೆ.

ಕೂಡಲೇ ಕುಟುಂಬದ ಸದಸ್ಯರು ಬೌರಿಂಗ್ ಆಸ್ಪತ್ರೆಗೆ ತೆರಳಿದಾಗ ಮೃತ ಶಿವಲಿಂಗನ ಶವ ನೋಡಿ ಪೊಲೀಸರಿಗೆ ಕೇಳಿದಾಗ ‘ನಿಮ್ಮ ಮಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಸಮಾರಂಭದಲ್ಲಿ ನಡೆದ ಕಾಲ್ತುಳಿತದಿಂದ ಮೃತಪಟ್ಟಿದ್ದಾನೆ. ನೀವು ಆಘಾತಗೊಳ್ಳುತ್ತೀರಿ ಎಂದು ನಾವು ಆಕ್ಸಿಡೆಂಟ್ ಆಗಿದೆ ಬನ್ನಿ ಅಂತ ಹೇಳಿದ್ದು’ ಎಂದು ತಿಳಿಸಿದ್ದರು.

ಇದನ್ನೂ ಓದಿ : ಸಮೂಹ ಸನ್ನಿಯ ಬಿತ್ತಿ ಹಣದ ಬೆಟ್ಟವನ್ನೇ ಬಾಚುತ್ತಿರುವ ಐಪಿಎಲ್; ಅಭಿಮಾನಿಗಳ ಕಣ್ಣಿಗೆ ಮಣ್ಣೆರಚುತ್ತಿದೆ!

ಆರ್‌ಸಿಬಿ ವಿಜಯೋತ್ಸವ ಸಂಭ್ರಮದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ ಒಟ್ಟು 11 ಜನ ಮೃತಪಟ್ಟಿದ್ದು, ಅದರಲ್ಲಿ ಯಾದಗಿರಿ ಮೂಲದ ವಲಸೆ ಕಾರ್ಮಿಕ ಕುಟುಂಬದ ಶಿವಲಿಂಗ ಕುಂಬಾರ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಮೃತ ಮಗನ ಶವ ಹೂಳಲು ಚಂದಪ್ಪನಿಗೆ ಸ್ವಂತ ಹೊಲ ಇಲ್ಲದಿರುವುದಕ್ಕೆ ಆಶನಾಳ ಗ್ರಾಮದ ಸೋದರ ಮಾವನ ಹೊಲದಲ್ಲಿ ಗುರುವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇನಾ ನೇಮಕಾತಿ ಆಯ್ಕೆ ಪ್ರಕ್ರಿಯೆ ಕುರಿತು ಅರಿವು; ಪೂರ್ವಭಾವಿ ಪರೀಕ್ಷೆ

ಭಾರತೀಯ ಸೇನೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ನೇಮಕಾತಿ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...